ಉಡುಪಿ ಜಿಲ್ಲಾ ಬಿಜೆಪಿ ನೂತನ ಅಧ್ಯಕ್ಷರಾಗಿ ಕಿಶೋರ್ ಕುಮಾರ್ ನೇಮಕ
Update: 2024-01-15 18:43 IST
ಕಿಶೋರ್ ಕುಮಾರ್
ಉಡುಪಿ: ಭಾರತೀಯ ಜನತಾ ಪಾರ್ಟಿ ಉಡುಪಿ ಜಿಲ್ಲಾಧ್ಯಕ್ಷರಾಗಿ ಕಿಶೋರ್ ಕುಮಾರ್ ಕುಂದಾಪುರ ಅವರನ್ನು ನೇಮಕ ಮಾಡಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಆದೇಶ ಹೊರಡಿಸಿದ್ದಾರೆ.
1996ರಲ್ಲಿ ರಾಜಕೀಯ ಪ್ರವೇಶಿಸಿದ ಕಿಶೋರ್, ಕುಂದಾಪುರ ನಗರ ಯುವ ಮೋರ್ಚಾ ಅಧ್ಯಕ್ಷರಾಗಿ, ಕುಂದಾಪುರ ವಿಧಾನ ಸಭಾ ಕ್ಷೇತ್ರ ಬಿಜೆಪಿಯ ಪ್ರಧಾನ ಕಾರ್ಯದರ್ಶಿಯಾಗಿ, ಕುಂದಾಪುರ ಕ್ಷೇತ್ರ ಬಿಜೆಪಿಯ ಅಧ್ಯಕ್ಷನಾಗಿ, ಕುಂದಾಪುರ ತಾಲೂಕು ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಅಧ್ಯಕ್ಷರಾಗಿ, ಕರ್ನಾಟಕದ ರಾಜ್ಯ ಬಿಜೆಪಿ ಮೀನುಗಾರರ ಪ್ರಕೋಷ್ಟದ ಸಂಚಾಲಕರಾಗಿ, ಉಡುಪಿ ಜಿಲ್ಲಾ ಬಿಜೆಪಿ ಉಪಾಧ್ಯಕ್ಷರಾಗಿ ಕಾರ್ಯನಿರ್ವಹಿಸಿದ್ದರು.
2012ರಲ್ಲಿ ಮಂತ್ರಿಸ್ಥಾನದಿಂದ ವಂಚಿತರಾದ ಹಾಲಾಡಿ ಶ್ರೀನಿವಾಸ ಶೆಟ್ಟಿ ಪಕ್ಷ ತ್ಯಜಿಸಿದ ಸಂದರ್ಭ ಪಕ್ಷದ ಪರ ನಿಂತ ಕಿಶೋರ್ ಕುಮಾರ್, 2013ರ ವಿಧಾನಸಭಾ ಚುನಾವಣೆಯಲ್ಲಿ ಕುಂದಾಪುರ ವಿಧಾನಸಭಾ ಕ್ಷೇತ್ರದ ಬಿಜೆಪಿಯ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದರು.