ವಿಕಲಚೇತನರಿಗೆ ಬ್ಯಾಟರಿ ಚಾಲಿತ ವೀಲ್‌ಚೇರ್ ಸೌಲಭ್ಯಕ್ಕೆ ಅರ್ಜಿ ಆಹ್ವಾನ
Update: 2024-01-16 20:30 IST
ಉಡುಪಿ, ಜ.16: ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ರಾಜ್ಯದಲ್ಲಿ ಕನಿಷ್ಟ 10 ವರ್ಷಗಳಿಂದ ವಾಸವಿದ್ದು, ವಾರ್ಷಿಕ ಆದಾಯ 2.00 ಲಕ್ಷ ರೂ. ಒಳಗಿರುವ, ಶೇ.75 ಮತ್ತು ಅದಕ್ಕಿಂತ ಹೆಚ್ಚಿನ ದೈಹಿಕ ವಿಕಲತೆ ಹೊಂದಿದ ಅರ್ಹ ವಿಕಲಚೇತನರಿಂದ ಬ್ಯಾಟರಿ ಚಾಲಿತ ವೀಲ್‌ಚೇರ್ ಸೌಲಭ್ಯಕ್ಕಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಸಲು ಜನವರಿ 31 ಕೊನೆಯ ದಿನ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಇಲಾಖೆಯ ದೂ.ಸಂಖ್ಯೆ: 0820-2574810, 0820-2574811, ಅಥವಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಸಿ ಬ್ಲಾಕ್, ತಳಮಹಡಿ, ಸಿಂಡಿಕೇಟ್ ಬ್ಯಾಂಕ್ ಹತ್ತಿರ, ಜಿಲ್ಲಾ ಪಂಚಾಯತ್ ವಿಭಾಗ, ರಜತಾದ್ರಿ, ಮಣಿಪಾಲ ಕಚೇರಿ ಯನ್ನು ಸಂಪರ್ಕಿಸಬಹುದು ಎಂದು ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ಗಳ ಕಛೇರಿ ಪ್ರಕಟಣೆ ತಿಳಿಸಿದೆ.