ಕಟ್ಟಡದಿಂದ ಬಿದ್ದು ಕಾರ್ಮಿಕ ಮೃತ್ಯು
Update: 2024-01-16 20:46 IST
ಕಾಪು: ಕಟ್ಟಡ ನಿರ್ಮಾಣ ಕೆಲಸ ಮಾಡುತ್ತಿದ್ದ ಕಾರ್ಮಿಕರೊಬ್ಬರು ಫೀಟ್ಸ್ ಕಾಯಿಲೆಯಿಂದ ಕೆಳಗೆ ಬಿದ್ದು ಮೃತಪಟ್ಟ ಘಟನೆ ಕಾಪು ಭಾರತ್ ನಗರ ಎಂಬಲ್ಲಿ ಜ.15ರಂದು ಮಧ್ಯಾಹ್ನ ವೇಳೆ ನಡೆದಿದೆ.
ಮೃತರನ್ನು ಹಾವೇರಿ ಜಿಲ್ಲೆಯ ಹಾನಗಲ್ ತಾಲೂಕಿನ ಗಣೇಶಪ್ಪ ಕನಿಕೇರ ಎಂಬವರ ಮಗ ಶಿವರಾಜ ಕನಿಕೇರ(33) ಎಂದು ಗುರುತಿಸಲಾಗಿದೆ. ಮಲ್ಲಾರು ಗ್ರಾಮದ ಕೊಂಬಗುಡ್ಡೆ ಎಂಬಲ್ಲಿ ಬಾಡಿಗೆ ಮನೆಯಲ್ಲಿ ವಾಸವಾಗಿರುವ ಇವರು, ಕಟ್ಟಡ ನಿರ್ಮಾಣ ಕೆಲಸ ಮಾಡುತ್ತಿದ್ದ ವೇಳೆ ಫೀಟ್ಸ್ ಕಾಯಿಲೆಯಿಂದ ಬಿದ್ದರೆನ್ನ ಲಾಗಿದೆ. ಇದರಿಂದ ತೀವ್ರವಾಗಿ ಗಾಯಗೊಂಡ ಅವರು ಉಡುಪಿ ಖಾಸಗಿ ಆಸ್ಪತ್ರೆಗೆ ಸಾಗಿಸುವ ದಾರಿ ಮಧ್ಯೆ ಮೃತಪಟ್ಟರು ಎಂದು ತಿಳಿದುಬಂದಿದೆ.
ಈ ಬಗ್ಗೆ ಕಾಪು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.