ಕೊಲ್ಲೂರು ದೇವಳಕ್ಕೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಭೇಟಿ
Update: 2024-01-18 17:44 IST
ಕೊಲ್ಲೂರು, ಜ.18: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಹಾಗೂ ಹಿರಿಯ ನಾಗರೀಕರ ಸಬಲೀಕರಣ ಸಚಿವರು ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಆರ್.ಹೆಬ್ಬಾಳ್ಕರ್ ಇಂದು ಕುಟುಂಬ ಸಮೇತ ಕೊಲ್ಲೂರು ಶ್ರೀಮೂಕಾಂಬಿಕಾ ದೇವಸ್ಥಾನಕ್ಕೆ ಭೇಟಿ ನೀಡಿ, ದೇವರ ದರ್ಶನ ಪಡೆದರು.
ದೇವಸ್ಥಾನಕ್ಕೆ ಆಗಮಿಸಿದ ಸಚಿವರನ್ನು ದೇವಸ್ಥಾನದ ಆಡಳಿತ ಮಂಡಳಿ ವತಿಯಿಂದ ಸ್ವಾಗತಿಸಲಾಯಿತು. ಸಚಿವರು ನಾಡಿನ ಒಳಿತಿಗಾಗಿ ಮೂಕಾಂಬಿಕಾ ದೇವರಿಗೆ ವಿಶೇಷ ಪೂಜೆ ಸಲ್ಲಿಸಿದರು. ಬಳಿಕ ದೇವಸ್ಥಾನದ ಆಡಳಿತ ಮಂಡಳಿ ವತಿಯಿಂದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಹಾಗೂ ಅವರ ಪುತ್ರ ಮೃಣಾಲ್ ಹೆಬ್ಬಾಳ್ಕರ್ ಅವರನ್ನು ಸತ್ಕರಿಸಲಾಯಿತು.
ಸಚಿವರನ್ನು ದೇವಸ್ಥಾನದ ಆವರಣದಲ್ಲಿ ಕಂಡ ತಕ್ಷಣ ಅಭಿಮಾನಿಗಳು ಸೆಲ್ಫಿ ತೆಗೆಸಿಕೊಳ್ಳಲು ಮುಗಿಬಿದ್ದರು. ಸಚಿವರ ಭೇಟಿ ಹಿನ್ನೆಲೆ ದೇವಸ್ಥಾನದ ಆಡಳಿತ ಮಂಡಳಿ ವತಿಯಿಂದ ಬಿಗಿ ಭದ್ರತೆ ಏರ್ಪಡಿಸಲಾಗಿತ್ತು.