ಗುಜರಿ ಅಂಗಡಿಗೆ ನುಗ್ಗಿ ಸೊತ್ತು ಕಳವು
Update: 2024-01-18 21:41 IST
ಕಾಪು, ಜ.18: ಗುಜರಿ ಅಂಗಡಿಯೊಂದಕ್ಕೆ ಜ.16ರಂದು ರಾತ್ರಿ ವೇಳೆ ನುಗ್ಗಿದ ಕಳ್ಳರು ಸಾವಿರಾರು ರೂ. ಮೌಲ್ಯದ ಸೊತ್ತುಗಳನ್ನು ಕಳವು ಮಾಡಿರುವ ಬಗ್ಗೆ ವರದಿಯಾಗಿದೆ.
ಅಬ್ದುಲ್ ರಝಾಕ್ ಎಂಬವರ ಗುಜರಿಯ ಅಂಗಡಿಯ ಎದುರಿನ ತಗಡು ಶೀಟಿನ ಶೆಡ್‌ನ ಬಾಗಿಲು ಮುರಿದು ಒಳನುಗ್ಗಿದ ಕಳ್ಳರು, ಒಟ್ಟು 90,000ರೂ. ಮೌಲ್ಯದ ಸೊತ್ತುಗಳನ್ನು ಕಳವು ಮಾಡಿಕೊಂಡು ಹೋಗಿರುವುದಾಗಿ ದೂರ ಲಾಗಿದೆ. ಈ ಬಗ್ಗೆ ಕಾಪು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.