×
Ad

ಕೆಮುಂಡೇಲು ಶಾಲೆಗೆ ಜಪಾನೀಸ್ ನಿಯೋಗದ ಭೇಟಿ

Update: 2024-01-19 19:51 IST

ಕಾಪು, ಜ.19: ಪುತ್ತಿಗೆ ಮಠದ ವಿಶ್ವ ಗೀತಾ ಪರ್ಯಾಯಕ್ಕೆ ವಿಶೇಷ ಅತಿಥಿಗಳಾಗಿ ಆಗಮಿಸಿದ ಜಪಾನ್ ದೇಶದ ರೆವ್ ಕೋಶೋ ನಿವಾನೋ ನೇತೃತ್ವದ ನಿಯೋಗ ಇಂದು ಎಲ್ಲೂರು ಸಮೀಪದ ಕೆಮುಂಡೇಲು ಅನುದಾನಿತ ಪ್ರಾಥಮಿಕ ಶಾಲೆಗೆ ಭೇಟಿ ನೀಡಿ, ವಿದ್ಯಾರ್ಥಿಗಳಿಗೆ ಮಧ್ಯಾಹ್ನದ ಬಿಸಿಯೂಟ ಬಡಿಸಿದರು.

ಜಪಾನಿನ ರಿಷ್ಯೋ ಕೊಸೈ ಕಾಯ್ ಎಂಬ ಸಂಸ್ಥೆಯ ನಿಯೋಜಿತ ಮಹಾ ಅಧ್ಯಕ್ಷೆ ಆಗಿರುವ ರೆವ್ ಕೋಶೋ ನಿವಾನೋ, ಶಾಲೆಯ ಮಕ್ಕಳನ್ನು ಉದ್ದೇಶಿಸಿ ಮಾತನಾಡಿ, ಮಕ್ಕಳಿಗೆ ಶಿಸ್ತು ಮತ್ತು ಸೇವೆ ಜೀವನದ ಅವಿಭಾಜ್ಯ ಅಂಗವಾಗಿ ರಬೇಕು ಎಂಬ ಕಿವಿಮಾತು ಹೇಳಿದರು.

ಶಾಲೆಯ ಮುಖ್ಯೋಪಾಧ್ಯಾಯ ಜಗನ್ನಾಥ ಶೆಟ್ಟಿ ಮತ್ತು ಅಧ್ಯಾಪಕ ಚಂದ್ರಹಾಸ ಪ್ರಭು ಶಾಲೆಯ ವೈಶಿಷ್ಟ್ಯತೆಯನ್ನು ವಿವರಿಸಿದರು. ನಿಯೋಗದ ಭೇಟಿಯ ಉಸ್ತುವಾರಿ ವಹಿಸಿರುವ ಅಮೇರಿಕಾದ ವಿಜ್ಞಾನಿ, ಡಾ. ಎ.ಕೇಶವರಾಜ್ ರೆವ್ ಕೋಶೋ ಅವರನ್ನು ಪರಿಚಯಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News