ವಾಣಿಜ್ಯ ಪರೀಕ್ಷೆ : ನಿಷೇದಾಜ್ಞೆ
Update: 2024-01-19 21:41 IST
ಉಡುಪಿ, ಜ.19: ಜನವರಿ 22ರಿಂದ 24ರವರೆಗೆ ವಾಣಿಜ್ಯ ಪರೀಕ್ಷೆಯು ಉಡುಪಿಯ ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆಯಲ್ಲಿ ನಡೆಯಲಿರುವ ಹಿನ್ನೆಲೆಯಲ್ಲಿ ಪರೀಕ್ಷೆಗಳು ಸುಸೂತ್ರವಾಗಿ ಮತ್ತು ದೋಷರಹಿತವಾಗಿ ನಡೆಸಲು ಹಾಗೂ ನಡೆಯಬಹುದಾದ ಎಲ್ಲಾ ರೀತಿಯ ಅವ್ಯವಹಾರಗಳನ್ನು ತಡೆಗಟ್ಟುವ ಸಲುವಾಗಿ ನಿಗದಿಪಡಿಸಿದ ಪರೀಕ್ಷೆ ಕೇಂದ್ರದ ಸುತ್ತಲಿನ 200 ಮೀ. ಪ್ರದೇಶವನ್ನು ನಿಷೇಧಿತ ಪ್ರದೇಶವೆಂದು ಘೋಷಿಸಿ, ಸೆಕ್ಷನ್ 144 (1)ರಂತೆ ನಿಷೇಧಾಜ್ಞೆ ಜಾರಿಗೊಳಿಸಿ, ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಡಾ.ಕೆ.ವಿದ್ಯಾಕುಮಾರಿ ಆದೇಶ ಹೊರಡಿಸಿದ್ದಾರೆ.