ರಾಜ್ಯ ಸರಕಾರದ ಸಾಧನೆಯನ್ನು ಜನರಿಗೆ ತಲುಪಿಸಿ: ವಿನಯ ಕುಮಾರ್ ಸೊರಕೆ
ಉಡುಪಿ: ರಾಜ್ಯ ಸರಕಾರ ಚುನಾವಣಾ ಪ್ರಣಾಳಿಕೆಯಲ್ಲಿ ನೀಡಿರುವ ಭರವಸೆಯಂತೆ ಐದಕ್ಕೆ ಐದು ಗ್ಯಾರಂಟಿ ಯೋಜನೆ ಗಳನ್ನು ಜಾರಿಗೆ ತಂದು, ಜನರಿಗೆ ಕೊಟ್ಟ ಮಾತು ಉಳಿಸಿಕೊಂಡಿದ್ದೇವೆ. ಭೂಮಸೂದೆಯಿಂದ ಹಿಡಿದು ಗ್ಯಾರಂಟಿ ಯೋಜನೆಯವರೆಗೆ ಕಾಂಗ್ರೆಸ್ ಪಕ್ಷದ ಸಾಧನೆಗಳನ್ನು ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಜನರಿಗೆ ತಲುಪಿಸುವ ಕೆಲಸ ಆಗಬೇಕು ಎಂದು ಮಾಜಿ ಸಚಿವ ಹಾಗೂ ಕೆಪಿಸಿಸಿ ಉಪಾಧ್ಯಕ್ಷ ವಿನಯ ಕುಮಾರ್ ಸೊರಕೆ ಹೇಳಿದ್ದಾರೆ.
ಬ್ರಹ್ಮಗಿರಿಯ ಜಿಲ್ಲಾ ಕಾಂಗ್ರೆಸ್ ಭವನದಲ್ಲಿ ಇತ್ತೀಚೆಗೆ ನಡೆದ ಜಿಲ್ಲಾ ಕಾಂಗ್ರೆಸ್ ಸಮಿತಿಯ ಸಭೆಯಲ್ಲಿ ಅವರು ಮಾತನಾಡುತಿದ್ದರು. ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಅಶೋಕ್ ಕುಮಾರ್ ಕೊಡವೂರು ಅಧ್ಯಕ್ಷತೆ ವಹಿಸಿದ್ದರು.
ಚುನಾವಣೆಗಾಗಿ ದೇವರ ಹೆಸರನ್ನು ಬಳಸುವ ಮೂಲಕ ಜನರ ಭಾವನೆ ಗಳನ್ನು ಕೆದಕಿ ಬಿಜೆಪಿ ಮತಗಳಿಸುವ ಷಡ್ಯಂತ್ರ ರೂಪಿಸುತ್ತಿದೆ.ಅದಕ್ಕೆ ಅತ್ಯುತ್ತಮ ಉದಾಹರಣೆ ಪರಶುರಾಮ್ ಥೀಮ್ ಪಾರ್ಕ್ ಹಾಗೂ ಅಯೋಧ್ಯಾ ರಾಮ ಮಂದಿರದ ಉದ್ಘಾಟನಾ ಸಮಾರಂಭ ಎಂದು ಸೊರಕೆ ವಿವರಿಸಿದರು.
ಬಿಜೆಪಿ ಅಧಿಕಾರದ ಅವಧಿಯಲ್ಲಿ ನಡೆದ ಪರಶುರಾಮ್ ಥೀಮ್ ಪಾರ್ಕ್ ಪ್ರಕರಣ, ಬ್ರಹ್ಮಾವರ ಸಕ್ಕರೆ ಕಾರ್ಖಾನೆ ಗುಜರಿ ಮಾರಾಟ ಪ್ರಕರಣ ಹಾಗೂ ಸುಜ್ಲಾನ್ ಪ್ರಕರಣಗಳು ಪ್ರಸ್ತುತ ತನಿಖೆಯ ಹಂತದಲ್ಲಿವೆ ಎಂದು ಅವರು ಹೇಳಿದರು.
ವಿಧಾನ ಪರಿಷತ್ ಸದಸ್ಯ ಮಂಜುನಾಥ್ ಭಂಡಾರಿ, ಚಿಕ್ಕಮಗಳೂರು ಜಿಲ್ಲಾಧ್ಯಕ್ಷ ಡಾ.ಅಂಶುಮಂತ್, ಜಿಲ್ಲಾ ಕಾರ್ಯಾ ಧ್ಯಕ್ಷ ಕಿಶನ್ ಹೆಗ್ಡೆ ಕೊಳ್ಕೆಬೈಲ್, ಪ್ರಸಾದ್‌ರಾಜ್ ಕಾಂಚನ್ ಸಭೆಯನ್ನುದ್ದೇಶಿಸಿ ಮಾತನಾಡಿದರು.
ಇತ್ತೀಚಿಗೆ ನಿಧನರಾದ ಜನಪ್ರತಿನಿಧಿಗಳಾಗಿ, ಸಹಕಾರಿಗಳಾಗಿ ಪಕ್ಷದ ವಿವಿಧ ಹುದ್ದೆಗಳಲ್ಲಿ ಕಾರ್ಯನಿರ್ವಹಿಸಿದ ಇಗ್ನೇಶಿಯಸ್ ಡಿ’ಸೋಜ, ಮುಖಂಡ ರಾದ ಚಂದ್ರಶೇಖರ್, ಪಡುಬಿದ್ರಿ ಶಬ್ಬೀರ್ ಸಾಹೇಬ್ ಹಾಗೂ ಬನ್ನಂಜೆ ಗಣೇಶ್ ಶೆಟ್ಟಿ ಅವರಿಗೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಎಂ. ಎ. ಗಪೂರ್ ನುಡಿನಮನ ಸಲ್ಲಿಸಿದರು.
ಸಭೆಯಲ್ಲಿ ಪಕ್ಷದ ಮುಖಂಡರಾದ ಮಲ್ಯಾಡಿ ಶಿವರಾಮ ಶೆಟ್ಟಿ, ದಿನೇಶ್ ಹೆಗ್ಡೆ ಮೊಳವಳ್ಳಿ, ವೆರೋನಿಕಾ ಕರ್ನೇಲಿಯೋ, ದಿನೇಶ್ ಪುತ್ರನ್, ಗೀತಾ ವಾಗ್ಳೆ, ಹಿರಿಯಣ್ಣ, ವಾಸುದೇವ ಯಡಿಯಾಳ, ಪ್ರದೀಪ್ ಶೆಟ್ಟಿ ವಂಡ್ಸೆ, ಶಂಕರ ಕುಂದರ್, ಅರವಿಂದ ಪೂಜಾರಿ , ರಮೇಶ್ ಕಾಂಚನ್, ಸಂತೋಷ್ ಕುಲಾಲ್, ನವೀನ್‌ಚಂದ್ರ ಸುವರ್ಣ, ಮೈರ್ಮಾಡಿ ಸುಧಾಕರ ಶೆಟ್ಟಿ, ಶಬ್ಬೀರ್ ಅಹಮ್ಮದ್, ದೇವಕಿ ಸಣ್ಣಯ್ಯ, ರೋಶನಿ ಒಲಿವರಾ, ಮಮತಾ ಶೆಟ್ಟಿ, ಕಿರಣ್ ಹೆಗ್ಡೆ, ಕೀರ್ತಿ ಶೆಟ್ಟಿ, ಜಯ ಕುಮಾರ, ಸತೀಶ್ ಕೊಡವೂರು, ಶಶಿಧರ ಶೆಟ್ಟಿ ಎಲ್ಲೂರು, ಮಹಾಬಲ ಕುಂದರ, ದಿಲೀಪ್ ಹೆಗ್ಡೆ, ವಿಶ್ವಾಸ್ ಅಮೀನ್, ಇಸ್ರಾಯಿಲ್ ಆತ್ರಾಡಿ, ಡಾ.ಯಾದವ ರಾವ್, ಅಶೋಕ್ ಕುಮಾರ ಎರ್ಮಾಳ್, ರಮಾನಂದ ಪೈ, ಉದ್ಯಾವರ ನಾಗೇಶ್ ಕುಮಾರ, ದೀಪಕ್ ಕೋಟ್ಯಾನ್, ಡಾ.ಸುನಿತಾ ಶೆಟ್ಟಿ, ಚಂದ್ರಶೇಖರ ಶೆಟ್ಟಿ, ಅಬ್ದುಲ್ ಅಜೀಜ್, ರಮೇಶ್ ಶೆಟ್ಟಿ, ಲೂಯಿಸ್ ಲೋಬೋ ಉಪಸ್ಥಿತರಿದ್ದರು.
ಉಪಾಧ್ಯಕ್ಷ ನೀರೆ ಕೃಷ್ಣ ಶೆಟ್ಟಿ ಸ್ವಾಗತಿಸಿ, ಸಹಕಾರಿ ಕಾಂಗ್ರೆಸ್ ಅಧ್ಯಕ್ಷ, ಅಣ್ಣಯ್ಯ ಸೇರಿಗಾರ್ ಕಾರ್ಯಕ್ರಮ ನಿರ್ವಹಿಸಿ ದರು. ಜಿಲ್ಲಾ ವಕ್ತಾರ ಭಾಸ್ಕರ ರಾವ್ ಕಿದಿಯೂರು ವಂದಿಸಿದರು.