ಬಡಗಬೆಟ್ಟು ಸೊಸೈಟಿಯ ಆಮಂತ್ರಣ ಪತ್ರಿಕೆ ಬಿಡುಗಡೆ
Update: 2024-01-20 20:08 IST
ಉಡುಪಿ: ಬಡಗಬೆಟ್ಟು ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿಯ ನೂತನ 11ನೇ ಕಾರ್ಕಳ ಶಾಖೆಯ ಜ.26ರಂದು ನಡೆ ಯುವ ಉದ್ಘಾಟನಾ ಸಮಾರಂಭದ ಆಮಂತ್ರಣ ಪತ್ರಿಕೆಯನ್ನು ಪರ್ಯಾಯ ಪುತ್ತಿಗೆ ಮಠಾಧೀಶ ಶ್ರೀ ಸುಗುಣೇಂದ್ರ ತೀರ್ಥ ಸ್ವಾಮೀಜಿ ಇಂದು ಬಿಡುಗಡೆಗೊಳಿಸಿದರು.
ಈ ಸಂದರ್ಭದಲ್ಲಿ ಉಡುಪಿ ಜಿಲ್ಲಾ ಸಹಕಾರ ಯೂನಿಯನ್ ಅಧ್ಯಕ್ಷ ಜಯಕರ ಶೆಟ್ಟಿ ಇಂದ್ರಾಳಿ, ಸಂಘದ ಉಪಾಧ್ಯಕ್ಷ ಎಲ್.ಉಮಾನಾಥ, ಪ್ರಧಾನ ವ್ಯವಸ್ಥಾಪಕ ರಾಜೇಶ್ ವಿ.ಶೇರಿಗಾರ್ ಹಾಗೂ ನಿರ್ದೇಶಕ ಮಂಡಳಿ ಸದಸ್ಯರು ಉಪಸ್ಥಿತರಿದ್ದರು.