ಸಚಿವ ಶಿವರಾಜ್ ತಂಗಡಗಿ ಉಡುಪಿ ಶ್ರೀಕೃಷ್ಣ ಮಠಕ್ಕೆ ಭೇಟಿ
Update: 2024-01-23 19:34 IST
ಉಡುಪಿ: ಕನ್ನಡ ಮತ್ತು ಸಂಸ್ಕೃತಿ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವ ಶಿವರಾಜ್ ತಂಗಡಗಿ ಮಂಗಳವಾರ ಉಡುಪಿ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿದರು.
ಕನಕನ ಕಿಂಡಿ ಮೂಲಕ ದೇವರ ದರ್ಶನ ಪಡೆದ, ಬಳಿಕ ಪರ್ಯಾಯ ಪುತ್ತಿಗೆ ಮಠಾಧೀಶ ಶ್ರೀಸುಗುಣೇಂದ್ರ ಸ್ವಾಮೀಜಿ ಅವ ರನ್ನು ಸಚಿವರು ಭೇಟಿಯಾಗಿ ಆಶೀರ್ವಾದ ಪಡೆದರು. ಈ ಸಂದರ್ಭದಲ್ಲಿ ಕಾಂಗ್ರೆಸ್ ಉಡುಪಿ ಜಿಲ್ಲಾಧ್ಯಕ್ಷ ಅಶೋಕ್ ಕುಮಾರ್ ಕೊಡವೂರು, ಮುಖಂಡ ಪ್ರಸಾದ್ ರಾಜ್ ಕಾಂಚನ್ ಮೊದಲಾದವರು ಉಪಸ್ಥಿತರಿದ್ದರು.