ಕನಿಷ್ಠ ವೇತನ ಸಹಿತ ವಿವಿಧ ಬೇಡಿಕೆಗಾಗಿ ಸ್ಕೀಂ ನೌಕಕರಿಂದ ಅಹೋರಾತ್ರಿ ಧರಣಿ
ಉಡುಪಿ, ಜ.23: ಬಜೆಟ್‌ನಲ್ಲಿ ಎಂಡಿಎಂಗೆ ಅನುದಾನ ಹೆಚ್ಚಳ ಮತ್ತು ಕನಿಷ್ಠ ವೇತನವನ್ನು ಘೋಷಿಸುವಂತೆ ಹಾಗೂ ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಸಿಐಟಿಯು ನೇತೃತ್ವದಲ್ಲಿ ಉಡುಪಿ ಜಿಲ್ಲಾ ಅಕ್ಷರ ದಾಸೋಹ ನೌಕರರ ಸಂಘ, ಕರ್ನಾಟಕ ರಾಜ್ಯ ಅಂಗನವಾಡಿ ನೌಕರರ ಸಂಘ ಉಡುಪಿ ಜಿಲ್ಲಾ ಸಮಿತಿ ಹಾಗೂ ಆಶಾ ಕಾರ್ಯಕರ್ತೆಯರ ಸಂಘದ ಸಹಯೋಗದಲ್ಲಿ ‘ಸಂಸದ ಕಚೇರಿ ಚಲೋ’ ಅಹೋರಾತ್ರಿ ಧರಣಿಯನ್ನು ಮಣಿಪಾಲದ ರಜತಾದ್ರಿಯಲ್ಲಿ ರುವ ಸಂಸದರ ಕಚೇರಿ ಮುಂದೆ ಹಮ್ಮಿಕೊಳ್ಳಲಾಗಿತ್ತು.
ಧರಣಿಯನ್ನುದ್ದೇಶಿಸಿ ಮಾತನಾಡಿದ ಸಿಐಟಿಯು ಜಿಲ್ಲಾಧ್ಯಕ್ಷ ಕೆ.ಶಂಕರ್, ಆಹಾರ, ಆರೋಗ್ಯ, ಶಿಕ್ಷಣಕ್ಕಾಗಿರುವ ಯೋಜನೆ ಗಳಾದ ಐಸಿಡಿಎಸ್, ಎಂಡಿಎಂ, ಎನ್‌ಎಚ್‌ಎಂ, ಐಸಿಪಿಎಸ್, ಎಸ್‌ಎಸ್‌ಎ, ನರೇಗಾ ಮೊದಲಾದ ಯೋಜನೆಗಳನ್ನು ಖಾಯಂ ಮಾಡುವ ಮೂಲಕ ಹಕ್ಕನ್ನು ಸಾರ್ವತ್ರಿಕಗೊಳಿಸ ಬೇಕು. ಈ ಯೋಜನೆಯ ಸಿಬ್ಬಂದಿಗಳನ್ನು ಖಾಯಂ ಮಾಡಬೇಕು. ಕೆಲಸದ ಅವಧಿಯನ್ನು 4ಗಂಟೆಯಿಂದ 6ಗಂಟೆಗೆ ಅಕ್ಷರ ದಾಸೋಹ ಕೈಪಿಡಿಯಲ್ಲಿ ಬದಲಾಯಿಸಬೇಕು ಎಂದು ಒತ್ತಾಯಿಸಿದರು.
ಬಿಸಿಯೂಟ ನೌಕರರಿಗೆ ಪರಿಹಾರ ನೀಡದೆ ನಿವೃತ್ತಿ ಮಾಡಬಾರದು. ಅಕ್ಷರ ದಾಸೋಹ ಯೋಜನೆಯನ್ನು ಸಂಪೂರ್ಣ ವಾಗಿ ಶಿಕ್ಷಣ ಇಲಾಖೆಯಡಿಯಲ್ಲಿ ನಡೆಸಬೇಕು. ನೌಕರರಿಗೆ ಕೂಡಲೇ ವೇತನ ಹೆಚ್ಚಳ ಮಾಡಬೇಕು. ವಿದ್ಯುತ್, ರೈಲ್ವೆ ಸೇರಿದಂತೆ ಯಾವುದೇ ಸಾರ್ವಜನಿಕ ವಲಯಗಳ ಖಾಸಗೀಕರಣ ಮಾಡ ಬಾರದು. ಕಾರ್ಮಿಕ ಕಾನೂನುಗಳ ಸಂಹಿತೆಗಳಾಗಿ ಮಾಡಿರುವುದನ್ನು ಕೈಬಿಟ್ಟು ಕಾರ್ಮಿಕರ ಪರವಾದ ನೀತಿಗಳನ್ನು ಜಾರಿ ಮಾಡಬೇಕು ಎಂದು ಅವರು ಆಗ್ರಹಿಸಿದರು.
ಅಂಗನವಾಡಿ ನೌಕರರ ಸಂಘದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸುಶೀಲಾ ನಾಡ ಮಾತನಾಡಿ, ದೇಶದ ಎಲ್ಲ ಅಂಗನವಾಡಿ ಕಾರ್ಯಕರ್ತೆ, ಸಹಾಯಕರಿಗೆ ಕನಿಷ್ಠ ವೇತನ 31ಸಾವಿರ ರೂ. ಜಾರಿಗೊಳಿಸಬೇಕು. ಸಾಮಾಜಿಕ ಭದ್ರತೆ ಗಳಾದ ಇಎಸ್‌ಐ, ಪಿಎಫ್, ಪಿಂಚಣಿ, ಎನ್‌ಪಿಎಸ್ ಬದಲಿಗೆ ಓಪಿ ಜಾರಿಗೊಳಿಸ ಬೇಕು. ಐಸಿಡಿಎಸ್‌ನ್ನು ಇಲಾಖೆಯಾಗಿ ಪರಿಗಣಿಸಿ ನೌಕರರನ್ನು ಖಾಯಂಗೊಳಿ ಸಬೇಕು. ಐಸಿಡಿಎಸ್‌ಗೆ ಕಡಿತ ಮಾಡಿರುವ 8200ರೂ. ಕೂಡಲೇ ಬಿಡುಗಡೆ ಗೊಳಿಸಬೇಕು. ಆಹಾರ, ಆರೋಗ್ಯ, ಶಿಕ್ಷಣವನ್ನು ದೇಶದ ಎಲ್ಲ ಜನರಿಗೆ ಖಾತ್ರಿ ಗೊಳಿಸಿ ದೇಶವನ್ನು ಅಭಿವೃದ್ಧಿ ಪಡಿಸಬೇಕು ಎಂದು ಒತ್ತಾಯಿಸಿದರು.
ಬಳಿಕ ಈ ಕುರಿತ ಮನವಿಯನ್ನು ಉಡುಪಿ ಚಿಕ್ಕಮಗಳೂರು ಸಂಸದೆ ಶೋಭಾ ಕರಂದ್ಲಾಜೆ ಅವರಿಗೆ ಸಲ್ಲಿಸಲಾಯಿತು. ಮನವಿಯನ್ನು ಅಪರ ಜಿಲ್ಲಾಧಿಕಾರಿ ಮಮತಾ ದೇವಿ ಸ್ವೀಕರಿಸಿದರು. ಧರಣಿಯಲ್ಲಿ ಆಶಾ ಕಾರ್ಯಕರ್ತೆಯರ ಸಂಘದ ಜಿಲ್ಲಾಧ್ಯಕ್ಷೆ ಶೀಲಾವತಿ, ಅಂಗನವಾಡಿ ನೌಕರರ ಸಂಘದ ಜಿಲ್ಲಾಧ್ಯಕ್ಷೆ ಭಾರತಿ, ಜಿಲ್ಲಾ ಖಜಾಂಚಿ ಯಶೋಧ ಕೆ., ಸಿಐಟಿಯು ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸುರೇಶ್ ಕಲ್ಲಾಗರ್, ಮುಖಂಡರಾದ ಬಾಲಕೃಷ್ಣ ಶೆಟ್ಟಿ, ಶಶಿಧರ ಗೊಲ್ಲ, ಕವಿರಾಜ್, ಎಚ್.ನರಸಿಂಹ, ಚಂದ್ರಶೇಖರ್, ಉಮೇಶ್ ಕುಂದರ್ ಮೊದಲಾದವರು ಉಪಸ್ಥಿತರಿದ್ದರು.
‘ಸ್ಕೀಂ ನೌಕರರ ಬೇಡಿಕೆಗಳನ್ನು ಈಡೇರಿಸದಿದ್ದರೆ ಮುಂದಿನ ಚುನಾವಣೆಯಲ್ಲಿ ಸಂಸದರನ್ನು ಮನೆ ಕಳುಹಿಸುವ ಕಾರ್ಯವನ್ನು ಮಾಡಬೇಕಾದೀತು. ಅಷ್ಟು ಶಕ್ತಿ ಸಾಮರ್ಥ್ಯ ಅಂಗನವಾಡಿ ನೌಕರರು, ಆಶಾ ಕಾರ್ಯಕರ್ತೆಯರು ಹಾಗೂ ಬಿಸಿಯೂಟ ನೌರಕರಿಗೆ ಇದೆ. ಕೇಂದ್ರ ಸರಕಾರ ಸ್ಕೀಂ ನೌಕರರ ಬಗ್ಗೆ ಮೌನ ವಹಿಸಿದೆ. ಆ ಬಗ್ಗೆ ಏನು ಮಾತನಾಡುತ್ತಿಲ್ಲ. ಇದರ ವಿರುದ್ಧ ಕ್ರಮ ತೆಗೆದುಕೊಳ್ಳ ದಿದ್ದರೆ ತಕ್ಕ ಪಾಠ ಕಲಿಸಲಾಗುವುದು’
-ಸುರೇಶ್ ಕಲ್ಲಾಗರ್, ಪ್ರಧಾನ ಕಾರ್ಯದರ್ಶಿ, ಸಿಐಟಿಯು ಉಡುಪಿ ಜಿ