ಪ್ರತ್ಯೇಕ ಪ್ರಕರಣ: ಇಬ್ಬರು ನಾಪತ್ತೆ
Update: 2024-01-25 20:35 IST
ಕೋಟ, ಜ.25: ಹೊಟೇಲ್ ವ್ಯವಹಾರದಲ್ಲಿ ನಷ್ಟ ಹೊಂದಿದ್ದ ಹಳ್ಳಾಡಿ ಹರ್ಕಾಡಿ ಗ್ರಾಮದ ವಂಡಾರು ನಿವಾಸಿ ನಾಗರಾಜ (50) ಎಂಬವರು ನ.28ರಂದು ಬೆಂಗಳೂರಿಗೆ ಹೋಗುವುದಾಗಿ ಹೇಳಿ ಹೋದವರು ನಾಪತ್ತೆಯಾಗಿದ್ದಾರೆ. ಈ ಬಗ್ಗೆ ಕೋಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕಾರ್ಕಳ: ಮಿಯಾರು ಗ್ರಾಮದ ನೆಲ್ಲಿಗುಡ್ಡೆ ಎಂಬಲ್ಲಿನ ಗ್ಯಾರೇಜ್‌ನಲ್ಲಿ ಕೆಲಸ ಮಾಡಿಕೊಂಡಿದ್ದ ಬಿಹಾರದ ಅರವಿಂದ ಚವ್ಹಾಣ್(23) ಎಂಬವರು ಜ.17ರಂದು ಊರಿಗೆ ಹೋಗುವುದಾಗಿ ಹೇಳಿ ಹೋದವರು ನಾಪತ್ತೆಯಾಗಿ ದ್ದಾರೆ. ಈ ಬಗ್ಗೆ ಕಾರ್ಕಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.