×
Ad

ಪ್ರತ್ಯೇಕ ಪ್ರಕರಣ: ಇಬ್ಬರ ಆತ್ಮಹತ್ಯೆ

Update: 2024-01-28 20:14 IST

ಮಣಿಪಾಲ: ವೈಯಕ್ತಿಕ ಕಾರಣಕ್ಕೆ ಮನನೊಂದು ತಾನು ವೈಟರ್ ಆಗಿ ಕೆಲಸ ಮಾಡಿಕೊಂಡಿದ್ದ ಮಣಿಪಾಲದ ಹೊಟೇಲಿನ ಸ್ಟಾಫ್ ರೂಮ್‌ನಲ್ಲಿ ಜ.24ರಂದು ನೇಣು ಬಿಗಿದು ಆತ್ಮಹತ್ಯೆಗೆ ಯತ್ನಿಸಿದ್ದ ಪ್ರಣೀತಾ ಮರಾಕ್ (26) ಎಂಬವರು ಚಿಕಿತ್ಸೆ ಫಲಕಾರಿಯಾಗದೇ ಜ.27ರಂದು ರಾತ್ರಿ ಮಂಗಳೂರಿನ ವೆನ್‌ಲಾಕ್ ಆಸ್ಪತ್ರೆಯಲ್ಲಿ ಮೃತಪಟ್ಟರು. ಈ ಬಗ್ಗೆ ಮಣಿಪಾಲ ಪೊಲೀಸ್ ಠಾಣೆ ಯಲ್ಲಿ ಪ್ರಕರಣ ದಾಖಲಾಗಿದೆ.

ಕೋಟ: ಮಾನಸಿಕ ಕಾಯಿಲೆಯಿಂದ ಬಳಲುತ್ತಿದ್ದ ಶಿರಿಯಾರ ಗ್ರಾಮದ ಚಂದ್ರ(30) ಎಂಬವರು ಜ.28ರಂದು ಬೆಳಗ್ಗೆ ಮನೆಯ ಅಡುಗೆ ಕೋಣೆಯ ಪಕಾಸಿಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಈ ಬಗ್ಗೆ ಕೋಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News