×
Ad

ಮಣಿಪಾಲ ಎಂಐಟಿ ಎನ್‌ಎಸ್‌ಎಸ್ ವಿದ್ಯಾರ್ಥಿಗಳಿಂದ ಸ್ವಚ್ಛತಾ ಕಾರ್ಯಕ್ರಮ

Update: 2024-01-29 18:36 IST

ಉಡುಪಿ, ಜ.29: ಮಣಿಪಾಲ ಎಂಐಟಿಯ ಎನ್‌ಎಸ್‌ಎಸ್ ವಿದ್ಯಾರ್ಥಿ ಗಳು ಸೋಮವಾರ ಮಲ್ಪೆಯ ಪ್ರವಾಸಿ ತಾಣ ಸೈಂಟ್ ಮೇರಿಸ್ ದ್ವೀಪಕ್ಕೆ ಭೇಟಿ ನೀಡಿ ಸ್ವಚ್ಛತಾ ಕಾರ್ಯ ನಡೆಸಿದರು.

ಸುಮಾರು 56 ಎನ್‌ಎಸ್‌ಎಸ್ ವಿದ್ಯಾರ್ಥಿಗಳು ದ್ವೀಪದಲ್ಲಿ ಬಿದ್ದಿದ್ದ ಪ್ಲ್ಯಾಸ್ಟಿಕ್ ಸೇರಿದಂತೆ ಕಸಗಳನ್ನು ಹೆಕ್ಕಿ ಸುಮಾರು 70 ಚೀಲಕ್ಕೂ ಅಧಿಕ ಪ್ಲಾಸ್ಟಿಕ್ ತ್ಯಾಜ್ಯ ಸಂಗ್ರಹಿಸಿದರು. ಅಲ್ಲದೆ ಪ್ರವಾಸಿಗರಿಗೆ ಪ್ಲಾಸ್ಟಿಕ್ ಕಸದ ಮತ್ತು ಸಮುದ್ರ ಪರಿಸರದ ಮೇಲೆ ಆಗುವ ಪರಿಣಾಮಗಳು ಮತ್ತು ಮಾಲಿನ್ಯದ ಕುರಿತು ಅರಿವು ಮೂಡಿಸಲಾಯಿತು.

ಈ ಕಾರ್ಯಕ್ಕೆ ಉಡುಪಿ ಜಿಲ್ಲಾಧಿಕಾರಿ ಡಾ.ವಿದ್ಯಾ ಕುಮಾರಿ ಅನುಮತಿ ನೀಡಿದ್ದು, ಉಡುಪಿ ನಗರಸಭೆ ಆಯುಕ್ತ ರಾಯಪ್ಪ ಸಹಕಾರ ನೀಡಿದರು. ಎನ್‌ಎಸ್‌ಎಸ್ ಕಾರ್ಯಕ್ರಮ ಅಧಿಕಾರಿ ಡಾ.ಬಾಲಕೃಷ್ಣ ಮದ್ದೋಡಿ ಸೈಂಟ್ ಮೇರಿಸ್ ದ್ವೀಪ ಮತ್ತು ಸಾಗರದಲ್ಲಿ ಪ್ಲಾಸ್ಟಿಕ್ ಮಾಲಿನ್ಯದ ಪರಿಣಾಮಗಳ ಬಗ್ಗೆ ಮಾಹಿತಿ ನೀಡಿದರು.

ಎಂಐಟಿ ನಿರ್ದೇಶಕ ಡಾ.ಅನಿಲ್ ರಾಣಾ, ಜಂಟಿ ನಿರ್ದೇಶಕ ಡಾ. ಸೋಮಶೇಖರ ಭಟ್ ಮಾರ್ಗದರ್ಶನ ನೀಡಿದರು. ಎನ್‌ಎಸ್‌ಎಸ್ ಕಾರ್ಯಕ್ರಮ ಅಧಿಕಾರಿ ಡಾ.ಲಕ್ಷ್ಮಣ ರಾವ್ ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News