ಗಾಂಜಾ ಸೇವನೆ: ಇಬ್ಬರು ವಶಕ್ಕೆ
Update: 2024-01-29 20:31 IST
ಮಣಿಪಾಲ, ಜ.29: ಮಣಿಪಾಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಗಾಂಜಾ ಸೇವನೆಗೆ ಸಂಬಂಧಿಸಿ ಇಬ್ಬರನ್ನು ಮಣಿಪಾಲ ಪೊಲೀಸರು ವಶಕ್ಕೆ ಪಡೆದು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಜ.23ರಂದು ಅಲ್ವಿನ್ ವರ್ಗೀಸ್ ಅಲೆಕ್(18) ಹಾಗೂ ಜ.25ರಂದು ಶಾನ್ವಾಜ್(21) ಎಂಬವರನ್ನು ವಶಕ್ಕೆ ಪಡೆದು ಮಣಿಪಾಲ ಕೆಎಂಸಿ ಪೊರೆನ್ಸಿಕ್ ಮೆಡಿಸಿನ್ ವಿಭಾಗದ ವೈದ್ಯರ ಮುಂದೆ ಹಾಜರುಪಡಿಸಿದ್ದು ಪರೀಕ್ಷೆಯಲ್ಲಿ ಆರೋಪಿಗಳು ಗಾಂಜಾ ಸೇವನೆ ಮಾಡಿರುವುದು ದೃಢಪಟ್ಟಿರುವುದಾಗಿ ಪೊಲೀಸರು ತಿಳಿಸಿದ್ದಾರೆ.