×
Ad

ಹೈಕೋರ್ಟ್ ನೂತನ ಮುಖ್ಯ ನ್ಯಾಯಮೂರ್ತಿಗೆ ಅಭಿನಂದನೆ

Update: 2024-01-30 19:56 IST

ಉಡುಪಿ: ಕರ್ನಾಟಕ ಉಚ್ಛ ನ್ಯಾಯಾಲಯದ ನೂತನ ಮುಖ್ಯ ನ್ಯಾಯಮೂರ್ತಿಗಳಾಗಿ ನೇಮಕಗೊಂಡ ಹೈಕೋರ್ಟ್ ನ್ಯಾಯಮೂರ್ತಿ ಪಿ.ಎಸ್.ದಿನೇಶ್ ಕುಮಾರ್ ಅವರನ್ನು ಇಂದು ಉಡುಪಿ ವಕೀಲರ ಸಂಘದ ವತಿಯಿಂದ ಅಭಿನಂದಿಸಲಾಯಿತು.

ಫೆ.10ರಂದು ಉಡುಪಿ ವಕೀಲರ ಸಂಘದ ವತಿಯಿಂದ ನ್ಯಾಯಾಲಯ ಆವರಣದಲ್ಲಿ ವಕೀಲರಿಗಾಗಿ ಆಯೋಜಿಸಿರುವ ರಾಜ್ಯ ಮಟ್ಟದ ಸಾಂಸ್ಕೃತಿಕ ಸ್ಪರ್ಧಾಕೂಟ ಕಲಾ ಸಂಭ್ರಮವನ್ನು ಉದ್ಘಾಟಿಸುವಂತೆ ಆಹ್ವಾನಿಸಿ, ಅವರಿಗೆ ಆಮಂತ್ರಣ ಪತ್ರಿಕೆಯನ್ನು ನೀಡಲಾಯಿತು.

ಈ ಸಂದರ್ಭದಲ್ಲಿ ಉಡುಪಿ ವಕೀಲರ ಸಂಘದ ಅಧ್ಯಕ್ಷ ರೆನೋಲ್ಡ್ ಪ್ರವೀಣ್ ಕುಮಾರ್, ಸೀನಿಯರ್ಸ್ ಕಮಿಟಿ ಸದಸ್ಯರಾದ ಆನಂದ ಮಡಿವಾಳ, ಕಾರ್ಯಕಾರಿ ಸಮಿತಿ ಸದಸ್ಯರಾದ ಆರೂರು ಸುಕೇಶ್ ಶೆಟ್ಟಿ ಹಾಗೂ ಹಿರಿಯ ನ್ಯಾಯವಾದಿ ಕೆ.ಸಿ.ಎಂ.ಭಕ್ತ ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News