×
Ad

ಮರವಂತೆಯಲ್ಲಿ ಸಂವಿಧಾನ ಜಾಗೃತಿ ರಥಕ್ಕೆ ಸ್ವಾಗತ

Update: 2024-01-30 20:19 IST

ಉಡುಪಿ: ದೇಶದೆಲ್ಲೆಡೆ ಮೇಲು-ಕೀಳು ಜಾತಿ ಪದ್ಧತಿಯನ್ನು ಹೋಗಲಾಡಿಸುವ ಉದ್ದೇಶದಿಂದ ಬಲವಾದ ಸಂವಿಧಾನ ವನ್ನು ರಚಿಸ ಲಾಯಿತು. ಸಂವಿಧಾನ ಧ್ಯೇಯದಲ್ಲಿ ನಾವು ಬದುಕುತ್ತಿದ್ದು, ಅದರ ಮಹತ್ವದ ಕುರಿತು ಸಾರ್ವಜನಿಕರಲ್ಲಿ ಅರಿವು ಮೂಡಿಸಲು ಸಂವಿಧಾನ ಜಾಗೃತಿ ಜಾಥಾ ರಥವು ಜಿಲ್ಲೆಯಾದ್ಯಂತ ಸಂಚರಿಸಲಿದೆ ಎಂದು ಶಾಸಕ ಗುರುರಾಜ್ ಶೆಟ್ಟಿ ಗಂಟಿಹೊಳೆ ಹೇಳಿದರು.

ಅವರು ಇಂದು ಮರವಂತೆಯಲ್ಲಿ ಇಂದು ಸಂವಿಧಾನ ಜಾಗೃತಿ ರಥವನ್ನು ಸ್ವಾಗತಿಸಿ ಅವರು ಮಾತನಾಡುತಿದ್ದರು. ಪ್ರಪಂಚದ ಅತೀದೊಡ್ಡ ಪ್ರಜಾಪ್ರಭುತ್ವ ಹೊಂದಿರುವ ರಾಷ್ಟ್ರ ಭಾರತ. ಅನೇಕ ದೇಶಗಳ ಸಂವಿಧಾನವನ್ನು ಅಧ್ಯಯನ ನಡೆಸಿ, ದೇಶಕ್ಕೆ ಹೊಂದುವಂತೆ ಡಾ.ಬಿ.ಆರ್.ಅಂಬೇಡ್ಕರ್ ಸಂವಿಧಾನವನ್ನು ರಚಿಸಿದ್ದಾರೆ. ಸಂವಿಧಾನವನ್ನು ಅರಿತುಕೊಳ್ಳುವುದರಿಂದ ದೇಶಕ್ಕೆ ಒಳಿತಾಗುತ್ತದೆ. ಯುವ ಪೀಳಿಗೆ ಸಂವಿಧಾನದ ಬಗ್ಗೆ ಜ್ಞಾನ ಹೊಂದುವುದು ಅತೀ ಅವಶ್ಯಕ ಎಂದರು.

ಸಂವಿಧಾನವು ನಮ್ಮ ದೇಶದ ಸರ್ವೊಚ್ಛ ಕಾನೂನಾಗಿದ್ದು, ಇದರ ಅಡಿಯಲ್ಲಿ ಇತರೆ ಎಲ್ಲಾ ಕಾನೂನುಗಳು ಬರುತತಿವೆ. ಕಾರ್ಯಾಂಗ, ನ್ಯಾಯಾಂಗ, ಶಾಸಕಾಂಗ ಇದರ ಅಡಿಯಲ್ಲಿ ಕಾರ್ಯನಿರ್ವಹಿಸುತ್ತವೆ. ಸಂವಿಧಾನದ ಅಡಿಯಲ್ಲಿ ನೀಡಿರುವ ಹಕ್ಕು ಮತ್ತು ಕರ್ತವ್ಯಗಳನ್ನು ಪಾಲಿಸು ವುದು ಪ್ರತಿಯೊಬ್ಬ ನಾಗರಿಕರ ಜವಾಬ್ದಾರಿಯಾಗಿದೆ ಎಂದು ಅವರು ತಿಳಿಸಿದರು.

ಈ ಸಂದರ್ಭದಲ್ಲಿ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು. ಉಪನ್ಯಾಸಕರು ಸಂವಿಧಾನ ಕುರಿತು ಉಪನ್ಯಾಸ ನೀಡಿದರು. ಈ ಸಂದರ್ಭದಲ್ಲಿ ತಾಪಂ ಇ.ಓ ಭಾರತಿ, ಪಿ.ಡಿ.ಓ, ಗ್ರಾಪಂ ಸದಸ್ಯರು, ಆಶಾ ಕಾರ್ಯಕರ್ತೆಯರು ಮೊದಲಾ ದವರು ಉಪಸ್ಥಿತರಿದ್ದರು. ಬಳಿಕ ಶಾಸಕರೇ ಖುದ್ದು ಡೊಳ್ಳು ಬಾರಿಸು ವುದರೊಂದಿಗೆ ಜಾಥಾದಲ್ಲಿ ಪಾಲ್ಗೊಂಡರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News