ವಿದ್ಯಾರ್ಥಿವೇತನ: ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ
Update: 2024-01-30 20:24 IST
ಉಡುಪಿ: ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಮೆಟ್ರಿಕ್ ನಂತರದ ಕೋರ್ಸುಗಳಲ್ಲಿ ವ್ಯಾಸಾಂಗ ಮಾಡುತ್ತಿರುವ ಅರ್ಹ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳು ಹಾಗೂ ಅಲೆಮಾರಿ, ಅರೆ ಅಲೆಮಾರಿ ವಿದ್ಯಾರ್ಥಿ ಗಳಿಂದ, ಇಲಾಖೆಯ ಮೂಲಕ ನೀಡಲಾಗುತ್ತಿರುವ ಮೆಟ್ರಿಕ್ ನಂತರದ ವಿದ್ಯಾರ್ಥಿವೇತನ, ಶುಲ್ಕ ಮರುಪಾವತಿ ಹಾಗೂ ವಿದ್ಯಾಸಿರಿ ಊಟ ಮತ್ತು ವಸತಿ ಸಹಾಯ ಯೋಜನೆ ಸೌಲಭ್ಯಕ್ಕಾಗಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸುವ ಅವಧಿಯನ್ನು ಫೆ.15ರ ವರೆಗೆ ವಿಸ್ತರಿಸಲಾಗಿದೆ.
ಹೆಚ್ಚಿನ ಮಾಹಿತಿಗಾಗಿ ಇಲಾಖೆಯ ಸಹಾಯವಾಣಿ ಸಂಖ್ಯೆ: 8050770005 ಅಥವಾ ರಾಜ್ಯ ವಿದ್ಯಾರ್ಥಿವೇತನ ತಂತ್ರಾಂಶದ ಸಹಾಯವಾಣಿ ಸಂಖ್ಯೆ: 1902 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.