×
Ad

ಟೈಲರ್ ಆತ್ಮಹತ್ಯೆ

Update: 2024-01-30 21:36 IST

ಉಡುಪಿ, ಜ.30: ಟೈಲರಿಂಗ್ ಕೆಲಸ ಮಾಡಿಕೊಂಡಿದ್ದ ಪುತ್ತೂರು ಗ್ರಾಮದ ಶಂಕರ (65) ಎಂಬವರು ಅನಾರೋಗ್ಯದಿಂದ ಮನನೊಂದು ಜ.29ರಂದು ಬೆಳಗ್ಗೆ ಮನೆಯ ಎದುರಿನ ತೆಂಗಿನ ಮರಕ್ಕೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಬಗ್ಗೆ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕೋಟ: ಹೊಟ್ಟೆ ನೋವಿನಿಂದ ಬಳಲುತ್ತಿದ್ದ ತೆಕ್ಕಟ್ಟೆಯ ಸೋಮನಾಥ(51) ಎಂಬವರು ಜೀವನದಲ್ಲಿ ಜಿಗುಪ್ಸೆಗೊಂಡು ಜ.29ರಂದು ರಾತ್ರಿ ಮನೆಯ ಸಮೀಪ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಬಗ್ಗೆ ಕೋಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News