ಉಡುಪಿ: ಕೋಟ್ಪಾ ಕಾಯ್ದೆಯಡಿ ಪ್ರಕರಣ ದಾಖಲು
Update: 2024-01-31 19:46 IST
ಉಡುಪಿ, ಜ.31: ಜಿಲ್ಲೆಯಲ್ಲಿ ಕೋಟ್ಪಾ ಕಾಯಿದೆಯನ್ನು ಅನುಷ್ಠಾನಗೊಳಿ ಸುವ ನಿಟ್ಟಿನಲ್ಲಿ ಉಡುಪಿ ತಾಲೂಕು ತಂಬಾಕು ನಿಯಂತ್ರಣ ತನಿಖಾ ದಳದ ವತಿಯಿಂದ ಸೋಮವಾರ ಕಾಪು ಪೇಟೆ, ಮೀನು ಮಾರುಕಟ್ಟೆ, ಮೂಳೂರು ಸೇರಿದಂತೆ ವಿವಿಧೆಡೆ ತಂಬಾಕು ಮಾರಾಟದ ಅಂಗಡಿ, ಹೋಟೆಲ್, ಬಾರ್ ಮತ್ತು ರೆಸ್ಟೋರೆಂಟ್ ಮೇಲೆ ದಾಳಿ ನಡೆಸಿ, ಪ್ರಕರಣ ದಾಖಲಿಸಿ, 5000 ರೂ. ದಂಡ ವಸೂಲಿ ಮಾಡಲಾಯಿತು.
ಈ ಸಂದರ್ಭದಲ್ಲಿ ತಾಲೂಕು ಆರೋಗ್ಯ ಅಧಿಕಾರಿ ಡಾ.ವಾಸುದೇವ, ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿ ಬಸವರಾಜ್, ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಚಂದ್ರಕಲಾ, ಕ್ಷೇತ್ರ ಶಿಕ್ಷಣಾಧಿಕಾರಿ ಚಂದ್ರಶೇಖರ್ ಮೊದಲಾದವರು ಉಪಸ್ಥಿತರಿದ್ದರು.