×
Ad

ಸಂವಿಧಾನ ಜಾಗೃತಿ ರಥಕ್ಕೆ ಕೆರ್ಗಾಲು ಗ್ರಾಪಂನಿಂದ ಅದ್ಧೂರಿ ಸ್ವಾಗತ

Update: 2024-01-31 19:47 IST

ಉಡುಪಿ, ಜ.31: ಸಂವಿಧಾನ ಮಹತ್ವ ಮತ್ತು ಸಂವಿಧಾನದ ಕುರಿತು ಅರಿವು ಮೂಡಿಸುವ ಸಂವಿಧಾನ ಜಾಗೃತಿ ಜಾಥಾ ರಥಕ್ಕೆ ಇಂದು ಕೆರ್ಗಾಲು ಗ್ರಾಮ ಪಂಚಾಯತ್ ವತಿಯಿಂದ ಅದ್ದೂರಿಯಾಗಿ ಬರಮಾಡಿಕೊಳ್ಳಲಾಯಿತು.

ಈ ಸಂದರ್ಭದಲ್ಲಿ ಕೆರ್ಗಾಲು ಗ್ರಾಮ ಪಂಚಾಯತ್ ಅಧ್ಯಕ್ಷೆ ರೇವತಿ ಪೂಜಾರಿ ಮಾತನಾಡಿ, ಸಂವಿಧಾನ ಜಾಗೃತಿ ಜಾಥಾವು ಜಿಲ್ಲೆಯಾದ್ಯಂತ ಸಂಚರಿಸಿ, ಸಾರ್ವಜನಿಕರಲ್ಲಿ ಸಂವಿಧಾನದ ಆಶಯ ಹಾಗೂ ಮೌಲ್ಯಗಳ ಕುರಿತು ಮಾಹಿತಿ ನೀಡುತ್ತ ಸಾಗುತ್ತಿದೆ. ಸಮಾನತೆಯನ್ನು ಆಡಳಿತದ ತತ್ವವಾಗಿ ಸ್ವೀಕರಿಸಬೇಕು. ಮಕ್ಕಳಿಗೆ ಧಾರ್ಮಿಕತೆಯನ್ನು ಬೋಧಿಸುವುದ ರೊಂದಿಗೆ ಮೂಢನಂಬಿಕೆಯಿಂದ ಹೊರಬಂದು ಉನ್ನತ ಮಟ್ಟದ ಶಿಕ್ಷಣ ಪಡೆಯಬೇಕು ಎಂದರು.

ಶಿಕ್ಷಕ ಪ್ರದೀಪ್ ಸಂವಿಧಾನ ಮಹತ್ವ ಕುರಿತು ಉಪನ್ಯಾಸ ನೀಡಿದರು. ಈ ಸಂದರ್ಭದಲ್ಲಿ ಗ್ರಾಪಂ ಸದಸ್ಯರು, ನೋಡೆಲ್ ಅಧಿಕಾರಿ ನಾಗೇಶ್ ನಾಯ್ಕ್, ಸಮಾಜ ಕಲ್ಯಾಣ ಅಧಿಕಾರಿ ರಾಘವೇಂದ್ರ ವೆರ್ಣೇಕರ್, ಸಂಜೀವಿನಿ ಸಂಘದ ಅಧ್ಯಕ್ಷರು, ಸದಸ್ಯರು, ಶಾಲಾ ಶಿಕ್ಷಕರು, ವಿದ್ಯಾರ್ಥಿಗಳು, ಗ್ರಾಮಸ್ಥರು ಹಾಗೂ ಮತಿತಿತರರು ಉಪಸ್ಥಿತರಿದ್ದರು.

ಕಂಬದಕೋಣೆ ಸರಕಾರಿ ಪದವಿ ಪೂರ್ವ ಕಾಲೇಜಿನಿಂದ ಗ್ರಾಪಂವರೆಗೆ ಸಂವಿಧಾನ ಜಾಗೃತಿ ಜಾಥಾವು ಸಾಗಿತು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News