ಸಾರ್ವಜನಿಕ ಶಾಂತಿ ಭಂಗ: ಇಬ್ಬರು ವಶಕ್ಕೆ
Update: 2024-01-31 20:37 IST
ಉಡುಪಿ: ಉಡುಪಿ ಸರ್ವಿಸ್ ಬಸ್ ನಿಲ್ದಾಣದ ಪೊಲೀಸ್ ಚೌಕಿ ಬಳಿ ಜ.30ರಂದು ಸಂಜೆ ವೇಳೆ ಗಲಾಟೆ ಮಾಡಿ ಸಾರ್ವಜನಿಕ ಶಾಂತಿ ಭಂಗ ಉಂಟು ಮಾಡುತ್ತಿದ್ದ ಇಬ್ಬರನ್ನು ಉಡುಪಿ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.
ಪ್ರೇಮನಾಥ ಮತ್ತು ಪ್ರವೀಣ್ ಎಂಬವರು ಅವಾಚ್ಯ ಶಬ್ಧಗಳಿಂದ ಬೈದಾಡುತ್ತಾ ಪರಸ್ಪರ ದೂಡಾಡಿಕೊಂಡು ಸಾರ್ವಜನಿ ಕರಿಗೆ ತೊಂದರೆ ಯಾಗುವ ರೀತಿಯಲ್ಲಿ ಭಯದ ಮತ್ತು ಪ್ರಕ್ಷುಬ್ದ ವಾತಾವರಣ ಉಂಟುಮಾಡಿ ಸಾರ್ವಜನಿಕ ಶಾಂತಿ ಭಂಗವುಂಟು ಮಾಡಿರುವುದಾಗಿ ದೂರಲಾಗಿದೆ.
ಈ ಬಗ್ಗೆ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.