×
Ad

ಎಕ್ಸ್‌ಪ್ಲೋರ್ ಬೈಂದೂರು ಕಾರ್ಯಕ್ರಮಕ್ಕೆ ಸಮುದ್ರದ ಮಧ್ಯೆ ಚಾಲನೆ

Update: 2024-02-03 19:31 IST

ಬೈಂದೂರು: ಬೈಂದೂರಿನ ಪ್ರವಾಸೋದ್ಯಮ ಕ್ಷೇತ್ರಗಳನ್ನು ಉತ್ತೇಜಿಸುವ ನಿಟ್ಟಿನಲ್ಲಿ ಹಮ್ಮಿಕೊಳ್ಳಲಾಗಿರುವ ಎಕ್ಸ್‌ಪ್ಲೋರ್ ಬೈಂದೂರು ಎಂಬ ವಿಶಿಷ್ಟ ಕಾರ್ಯಕ್ರಮಕ್ಕೆ ಇಂದು ವಿಭಿನ್ನ ರೀತಿಯಲ್ಲಿ ಚಾಲನೆ ನೀಡಲಾಯಿತು.

ಬೈಂದೂರು ಶಾಸಕ ಗುರುರಾಜ್ ಗಂಟಿಹೊಳೆ ಬೈಂದೂರಿನ ಸೋಮೇಶ್ವರ ತೀರದ ನೇರಕ್ಕೆ ಸಮುದ್ರ ಮಧ್ಯದ ನಾಯ್ಕನ ಕಲ್ಲು ಪ್ರದೇಶದ ಬಳಿ ಸಮುದ್ರ ದಾಳದಲ್ಲಿ ಸ್ಕೂಬಾ ಡೈವಿಂಗ್ ಮೂಲಕ ನೀರಿನಲ್ಲಿ ತೇಲಾಡುತ್ತ ಎಕ್ಸ್‌ಪ್ಲೋರ್ ಬೈಂದೂರು ಕಾರ್ಯಕ್ರಮದ ಪೋಸ್ಟರ್ ಬಿಡುಗಡೆಗೊಳಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

ಸಮೃದ್ಧ ಬೈಂದೂರು ಎಂಬ ಪರಿಕಲ್ಪನೆಯಡಿಯಲ್ಲಿ ಈ ಕಾರ್ಯಕ್ರಮ ಮೂಡಿ ಬರುತ್ತಿದ್ದು, ಕಾರ್ಯಕ್ರಮದ ಭಾಗವಾಗಿ ವಿವಿಧ ರೀತಿಯ ಸ್ಪರ್ಧೆಗಳನ್ನು ಕೂಡ ಹಮ್ಮಿಕೊಳ್ಳಲಾಗಿದೆ. ಬೈಂದೂರಿನ ಸೌಂದರ್ಯವನ್ನು ಜಾಗತಿಕ ಮಟ್ಟದಲ್ಲಿ ಪಸರಿ ಸಲು ಕ್ಷೇತ್ರಕ್ಕೆ ಸಂಬಂಧಪಟ್ಟಂತೆ ರೀಲ್ಸ್, ಫೋಟೋಗ್ರಫಿ, ಡ್ರೋನ್ ಶೂಟ್, ಲೋಗೋ ಡಿಸೈನ್ ಎಂಬ ಸ್ಪರ್ಧೆಗಳನ್ನು ಆಯೋಜಿಸಿದ್ದು, ಆಕರ್ಷಕ ಬಹುಮಾನ ಕೂಡ ಪ್ರಾಯೋಜಿಸಲಾಗಿದೆ.

ಎಕ್ಸ್‌ಪ್ಲೋರ್ ಬೈಂದೂರು ಕಾರ್ಯಕ್ರಮದಲ್ಲಿ ಭಾಗವಹಿಸಲು ಎಲ್ಲರಿಗೂ ಮುಕ್ತ ಅವಕಾಶವಿದ್ದು, ಪ್ರವಾಸಾಸಕ್ತರು, ಪ್ರವಾಸೋದ್ಯಮಿಗಳು, ಸಾಮಾಜಿಕ ಜಾಲತಾಣದ ಇನ್‌ಫ್ಲುಯೆನ್ಸರ್‌ಗಳು, ಕ್ಷೇತ್ರದ ಜನತೆ ಈ ಕಾರ್ಯಕ್ರಮದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು ಮತ್ತು ಹೆಚ್ಚಿನ ಮಾಹಿತಿ ಹಾಗೂ ಸಂಪರ್ಕಕ್ಕಾಗಿ 8310290427/8618954293 ಸಂಪರ್ಕಿಸುವಂತೆ, contest.sb2024gmail.com ಇ-ಮೇಲ್ ಮೂಲಕವೂ ಮಾಹಿತಿ ಪಡೆದುಕೊಳ್ಳುವಂತೆ ಎಂದು ಶಾಸಕ ಗುರುರಾಜ್ ಗಂಟಿಹೊಳೆ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News