×
Ad

ರಾಷ್ಟ್ರೀಯ ಮತದಾರರ ದಿನಾಚರಣೆ: ರಾಜ್ಯಮಟ್ಟದ ವಿಜೇತರು

Update: 2024-02-03 19:36 IST

ಉಡುಪಿ: 2024ನೇ ರಾಷ್ಟ್ರೀಯ ಮತದಾರರ ದಿನಾಚರಣೆಯ ಪದವಿ /ಸ್ನಾತಕೋತ್ತರ ವಿಭಾಗದಲ್ಲಿ ರಾಜ್ಯಮಟ್ಟದ ವಿವಿಧ ಸ್ಪರ್ಧೆಗಳಲ್ಲಿ ಉಡುಪಿ ಜಿಲ್ಲೆಯ ವಿದ್ಯಾರ್ಥಿಗಳು ಬಹುಮಾನ ಪಡೆದುಕೊಂಡಿದ್ದಾರೆ.

ಇಂಗ್ಲೀಷ್ ಪ್ರಬಂಧ ಸ್ಪರ್ಧೆಯಲ್ಲಿ ಪ್ರಥಮ ಬಹುಮಾನವನ್ನು ತೆಂಕನಿಡಿ ಯೂರು ಸರಕಾರಿ ಪ್ರಥಮ ದರ್ಜೆ ಕಾಲೇಜು ಹಾಗೂ ಸ್ನಾತಕೋತ್ತರ ಅಧ್ಯಯನ ಕೇಂದ್ರದ ದ್ವಿತೀಯ ಎಂ.ಕಾಂ. ವಿದ್ಯಾರ್ಥಿನಿ ತ್ರಿವೇಣಿ ನಿಂಜೂರು ಮತ್ತು ಕನ್ನಡ ಪ್ರಬಂಧ ಸ್ಪರ್ಧೆಯಲ್ಲಿ ದ್ವಿತೀಯ ಬಹುಮಾನವನ್ನು ಶಂಕರನಾರಾಯಣ ಸರಕಾರಿ ಪ್ರಥಮ ದರ್ಜೆ ಕಾಲೇಜು ಹಾಗೂ ಸ್ನಾತಕೋತ್ತರ ಅಧ್ಯಯನ ಕೇಂದ್ರದ ತೃತೀಯ ಬಿ.ಎ. ವಿದ್ಯಾರ್ಥಿನಿ ಅಕ್ಷತಾ ಪಡೆದಿದ್ದಾರೆ.

ಜ.25ರಂದು ಬೆಂಗಳೂರಿನಲ್ಲಿ ನಡೆದ ರಾಜ್ಯಮಟ್ಟದ ಕಾರ್ಯಕ್ರಮದಲ್ಲಿ ಇವರು ರಾಜ್ಯಪಾಲರಿಂದ ಬಹುಮಾನವನ್ನು ಸ್ವೀಕರಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News