ನಾಟಿ ವೈದ್ಯ ಶ್ರೀನಿವಾಸ ಪೂಜಾರಿ ನಿಧನ
Update: 2024-02-04 21:26 IST
ಉಡುಪಿ, ಫೆ.4: ನಾಟಿ ವೈದ್ಯ ಕೊಂಡಕೂರು ನಿವಾಸಿ ಶ್ರೀನಿವಾಸ ಪೂಜಾರಿ (68) ಅಲ್ಪಕಾಲದ ಅಸೌಖ್ಯದಿಂದ ಇಂದು ಸ್ವಗೃಹದಲ್ಲಿ ನಿಧನರಾದರು.
ನಾಟಿ ಮದ್ದಿನ ಮೂಲಕ ಪ್ರಸಿದ್ಧರಾಗಿದ್ದ ಇವರು, ಸಾಮಾಜಿಕ ಚಟುವಟಿಕೆ ಗಳಲ್ಲಿಯೂ ತನ್ನನ್ನು ತೊಡಗಿಸಿಕೊಂಡಿದ್ದರು. ವಿಧಾನ ಸಭೆ ಮತ್ತು ಲೋಕಸಭಾ ಚುನಾವಣೆಯಲ್ಲೂ ಉಡುಪಿ ಕ್ಷೇತ್ರದಿಂದ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದರು. ಇವರು ಪತ್ನಿ, ಐವರು ಪುತ್ರರು, ಮೂವರು ಪುತ್ರಿಯರು ಹಾಗೂ ಅಪಾರ ಬಂಧು ಮಿತ್ರರನ್ನು ಅಗಲಿದ್ದಾರೆ.