×
Ad

ಪರೀಕ್ಷಾ ಸಮಯ ಲೋಡ್‌ ಶೆಡ್ಡಿಂಗ್ ಮಾಡದಂತೆ ಇಂಧನ ಸಚಿವರಿಗೆ ಮನವಿ

Update: 2024-02-06 17:54 IST

ಕೆ.ಜೆ.ಜಾರ್ಜ್

ಉಡುಪಿ: ವಿದ್ಯಾರ್ಥಿಗಳ ಪರೀಕ್ಷಾ ಸಮಯದಲ್ಲಿ ವಿದ್ಯುತ್ ಲೋಡ್ ಶೆಡ್ಡಿಂಗ್ ಮಾಡದಂತೆ ಇಂಧನ ಸಚಿವ ಕೆ.ಜೆ.ಜಾರ್ಜ್ ಅವರಿಗೆ ಉಡುಪಿ ಶಾಸಕ ಯಶ್ಪಾಲ್ ಸುವರ್ಣ ಮನವಿ ಸಲ್ಲಿಸಿದರು.

ಎಸ್.ಎಸ್.ಎಲ್.ಸಿ. ವಾರ್ಷಿಕ ಪರೀಕ್ಷೆಗೆ ಪೂರ್ವ ಸಿದ್ದತಾ ಪರೀಕ್ಷೆಗಳು ಫೆ.23ರಿಂದ ಆರಂಭವಾಗಲಿದ್ದು, ಎಸ್.ಎಸ್.ಎಲ್.ಸಿ. ಅಂತಿಮ ಪರೀಕ್ಷೆ, ಪದವಿ ಪೂರ್ವ, ಪದವಿ ಹಾಗೂ ಸ್ನಾತಕೋತ್ತರ ಪರೀಕ್ಷೆಗಳು ಮಾರ್ಚ್ ಹಾಗೂ ಏಪ್ರಿಲ್ ತಿಂಗಳಲ್ಲಿ ನಡೆಯಲಿದೆ.

ಈ ಪರೀಕ್ಷೆಗಳು ವಿದ್ಯಾರ್ಥಿಗಳ ಜೀವನದಲ್ಲಿ ಒಂದು ಪ್ರಮುಖ ಘಟ್ಟವಾಗಿದೆ. ಅಂತಿಮ ಪರೀಕ್ಷೆಗಳಿಗೆ ವಿದ್ಯಾರ್ಥಿಗಳು ತಯಾರಿ ನಡೆಸುತ್ತಿದ್ದು ಈ ಸಂದರ್ಭ ದಲ್ಲಿ ವಿದ್ಯಾರ್ಥಿಗಳ ಅಭ್ಯಾಸಕ್ಕೆ ಅನುಕೂಲವಾಗುವಂತೆ ವಿದ್ಯುತ್ ಲೋಡ್ ಶೆಡ್ಡಿಂಗ್ ಮಾಡದಂತೆ ಅಧಿಕಾರಿಗಳಿಗೆ ಸೂಚನೆ ನೀಡುವಂತೆ ಅವರು ಮನವಿ ಯಲ್ಲಿ ಆಗ್ರಹಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News