×
Ad

ಸರಕಾರಿ ನೌಕರರಿಗೆ ಆರೋಗ್ಯ ಸಂಜೀವಿನಿ ನೀಡುವ ಬಗ್ಗೆ ಸಿಎಂ ಜೊತೆ ಚರ್ಚೆ: ಷಡಾಕ್ಷರಿ

Update: 2024-02-07 18:45 IST

ಉಡುಪಿ: ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘ ಉಡುಪಿ ಜಿಲ್ಲೆ ಇದರ ವತಿಯಿಂದ ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘ ಬೆಂಗಳೂರು ಇದರ ಸಹಯೋಗದೊಂದಿಗೆ ಎಸೆಸೆಲ್ಸಿ ಹಾಗೂ ಪಿಯುಸಿ ವಿದ್ಯಾರ್ಥಿಗಳ ಪ್ರತಿಭಾ ಪುರಸ್ಕಾರ ಕಾರ್ಯಕ್ರಮವು ಮಣಿಪಾಲ ರಜತಾದ್ರಿಯ ಅಟಲ್ ಬಿಹಾರಿ ವಾಜಪೇಯಿ ಸಭಾ ಭವನದಲ್ಲಿ ಮಂಗಳವಾರ ಜರಗಿತು.

ಕಾರ್ಯಕ್ರಮವನ್ನು ಉದ್ಘಾಟಿಸಿದ ಸರಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್.ಷಡಾಕ್ಷರಿ ಮಾತನಾಡಿ, ವಿದ್ಯಾರ್ಥಿಗಳಿಗೆ ಸ್ಪೂರ್ತಿ ತುಂಬುವುದ ರೊಂದಿಗೆ 7ನೇ ವೇತನ ಆಯೋಗ, ಹಳೆ ಪಿಂಚಣಿ ಸ್ಕೀಮ್‌ನ ನೌಕರರನನ್ನು ಹೊಸ ಪಿಂಚಣಿ ಸ್ಕೀಮ್‌ಗೆ ತರುವ ಬಗ್ಗೆ ಮತ್ತು ಆರೋಗ್ಯ ಸಂಜೀವಿನಿಯನ್ನು ರಾಜ್ಯ ಸರಕಾರಿ ನೌಕರರಿಗೆ ನೀಡುವ ಬಗ್ಗೆ ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಿದ್ದು ಮುಖ್ಯಮಂತ್ರಿಗಳು ಸಕಾರಾತ್ಮಕವಾಗಿ ಸ್ಪಂದಿಸಿ, ಫೆ.27ರಂದು ಸಮ್ಮೇಳನಕ್ಕೆ ದಿನಾಂಕ ನಿಗಧಿಪಡಿಸಿಸಲಾಗಿದೆ ಎಂದರು.

ಉಡುಪಿ ಜಿಲ್ಲಾಧಿಕಾರಿ ಡಾ.ವಿದ್ಯಾ ಕುಮಾರಿ ಮಾತನಾಡಿ, ವಿದ್ಯಾರ್ಥಿಗಳಿಗೆ ಮತ್ತು ಪೋಷಕರಿಗೆ ಎಸೆಸೆಲ್ಸಿ ಮತ್ತು ಪಿಯುಸಿ ವಿದ್ಯಾರ್ಥಿಗಳ ಜೀವನದ ಭವಿಷ್ಯದ ಘಟ್ಟ. ಈ ಕಾಲವನ್ನು ಸರಿಪಡಿಸಿಕೊಂಡರೆ ಮುಂದಿನ ಜೀವನ ಉಜ್ವಲವಾಗಲಿದೆ ಎಂದು ತಿಳಿಸಿದರು.

ಜಿ.ಪಂ. ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರತೀಕ್ ಬಾಯಲ್, ರಾಜ್ಯ ಸಂಘದ ಉಪಾಧ್ಯಕ್ಷ ಎಂ.ವಿ ರುದ್ರಪ್ಪ, ಪ್ರಧಾನ ಕಾರ್ಯದರ್ಶಿ ಶ್ರೀನಿವಾಸ್, ಉಪಾಧ್ಯಕ್ಷ ಬಸವರಾಜು ಎಸ್., ಉಪಾಧ್ಯಕ್ಷ ಆರ್.ಮೋಹನ್ ಕುಮಾರ್, ಉಡುಪಿ ಜಿಲ್ಲಾ ವಿದ್ಯಾಂಗ ಉಪನಿರ್ದೇಶಕ ಗಣಪತಿ ಕೆ., ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಈಶ್ವರಪ್ಪ ಗಡಾದ್ ಉಪಸ್ಥಿತರಿದ್ದರು.

ಸಂಘದ ಜಿಲ್ಲಾಧ್ಯಕ್ಷ ಕೆ.ದಿನಕರ ಶೆಟ್ಟಿ ಅಂಪಾರು ಅಧ್ಯಕ್ಷತೆ ವಹಿಸಿದ್ದರು. ಉಡುಪಿ ಜಿಲ್ಲಾ ಸರಕಾರಿ ನೌಕರರ ಸಂಘದ ಪದಾಧಿಕಾರಿಗಳು ಮತ್ತು ಕಾರ್ಯಕಾರಿ ಸಮಿತಿ ಸದಸ್ಯರು ಉಪಸ್ಥಿತರಿದ್ದರು. ಜಿಲ್ಲಾ ಉಪಾಧ್ಯಕ್ಷ ಪ್ರಶಾಂತ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು. ಜಿಲ್ಲಾ ಕಾರ್ಯದರ್ಶಿ ಕೃಷ್ಣಯ್ಯ ವಂದಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News