×
Ad

ನಕ್ಸಲ್ ಪ್ರತ್ಯಕ್ಷ ವರದಿ; ಪೊಲೀಸ್ ತಂಡ ಪರಿಶೀಲನೆ ನಡೆಸುತ್ತಿದೆ: ಉಡುಪಿ ಜಿಲ್ಲಾ ಎಸ್ಪಿ ಡಾ.ಅರುಣ್

Update: 2024-02-07 20:58 IST

ಉಡುಪಿ, ಫೆ.7: ಕುಂದಾಪುರ ಪರಿಸರದಲ್ಲಿ ಶಂಕಿತ ನಕ್ಸರು ಕಾಣಿಸಿಕೊಂಡಿದ್ದಾರೆಂಬ ವರದಿಯ ಕುರಿತು ಪೊಲೀಸ್ ತಂಡ ಪರಿಶೀಲನೆ ನಡೆಸುತ್ತಿದೆ ಎಂದು ಉಡುಪಿ ಜಿಲ್ಲಾ ಪೊಲೀಸ್ ಅಧೀಕ್ಷಕ ಡಾ.ಅರುಣ್ ಕೆ. ತಿಳಿಸಿದ್ದಾರೆ.

ನಕ್ಸಲ್ ಪ್ರತ್ಯಕ್ಷವಾಗಿರುವ ಬಗ್ಗೆ ಈವರೆಗೆ ಯಾವುದೇ ಮಾಹಿತಿ ಲಭ್ಯವಾಗಿಲ್ಲ. ಈ ಬಗ್ಗೆ ಪರಿಶೀಲನೆ ನಡೆಸಲಾಗುತ್ತಿದೆ. ಈ ಕುರಿತು ನಕ್ಸಲ್ ನಿಗ್ರಹ ಪಡೆಯ ಜೊತೆ ಸೇರಿ ಎಲ್ಲ ರೀತಿಯ ಮುಂಜಾಗ್ರತಾ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಅವರು ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News