×
Ad

ಉಡುಪಿ: ರಾಜ್ಯಮಟ್ಟದ ಉದ್ಯೋಗ ಮೇಳ

Update: 2024-02-07 22:07 IST

ಉಡುಪಿ: ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ, ಕರ್ನಾಟಕ ಕೌಶಲ್ಯಾಭಿವೃದ್ಧಿ ನಿಗಮ (ಕೆಎಸ್‌ಡಿಸಿ) ಬೆಂಗಳೂರು ಇದರ ವತಿಯಿಂದ ಉದ್ಯೋಗಾಕಾಂಕ್ಷಿಗಳಿಗೆ ಉದ್ಯೋಗಾವಕಾಶ ಕಲ್ಪಿಸುವ ಸಲುವಾಗಿ ಫೆಬ್ರವರಿ 26 ಮತ್ತು 27ರಂದು ರಾಜ್ಯಮಟ್ಟದ ಯುವ ಸಮೃದ್ಧಿ ಸಮ್ಮೇಳನ ಬೃಹತ್ ಉದ್ಯೋಗ ಮೇಳ- 2024ನ್ನು ಬೆಂಗಳೂರಿನ ಅರಮನೆ ಮೈದಾನದಲ್ಲಿ ಆಯೋಜಿಸಲಾಗುತ್ತಿದೆ.

ಇದರಲ್ಲಿ ಎಲ್ಲಾ ರೀತಿಯ ವಿದ್ಯಾರ್ಹತೆಯುಳ್ಳ ಉದ್ಯೋಗಾಕಾಂಕ್ಷಿಗಳು -https://skillconnect.kaushalkar.com/-ಲಿಂಕ್‌ನಲ್ಲಿ ಹೆಸರು ನೋಂದಣಿ ಮಾಡಿಕೊಳ್ಳುವ ಮೂಲಕ ಉದ್ಯೋಗ ಮೇಳದ ಸದುಪಯೋಗ ಪಡೆದುಕೊಳ್ಳುವಂತೆ ಜಿಲ್ಲಾ ಕೌಶಲ್ಯಾಭಿವೃದ್ಧಿ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News