×
Ad

ಮಣಿಪಾಲ: ಕಲಾಕೃತಿ ಮೂಲಕ ಕ್ಯಾನ್ಸರ್ ಜಾಗ್ರತಿ

Update: 2024-02-08 19:57 IST

ಉಡುಪಿ: ವಿಶ್ವ ಕ್ಯಾನ್ಸರ್ ದಿನದ ಅಂಗವಾಗಿ ಮಣಿಪಾಲದ ಕಲಾವಿದರಾದ ಶ್ರೀನಾಥ್ ಮಣಿಪಾಲ್ ಮತ್ತು ರವಿ ಹಿರೇಬೆಟ್ಟು ಇವರು ಡಾ. ರಂಜಿತಾ ಶೆಟ್ಟಿ ಇವರ ಮಾರ್ಗದರ್ಶನದಲ್ಲಿ ಕೆಎಂಸಿ ಮಣಿಪಾಲದ ಸಮುದಾಯ ವೈದ್ಯಕೀಯ ವಿಭಾಗದ ಸಹಯೋಗದೊಂದಿಗೆ ಮಣಿಪಾಲದ ಇಂಟರಾಕ್ಟ್ ಹಾಲ್‌ನಲ್ಲಿ ಬೃಹತ್ ಜಲವರ್ಣ ಕಲಾಕೃತಿಯನ್ನು ರಚಿಸಿದರು.

ಕಸ್ತೂರ್ಬಾ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ.ಅವಿನಾಶ್ ಶೆಟ್ಟಿ ಕಲಾಕೃತಿಯನ್ನು ಅನಾವರಣಗೊಳಿಸಿದರು. ಸಮು ದಾಯ ವೈದ್ಯಕೀಯ ವಿಭಾಗದ ಮುಖ್ಯಸ್ಥ ಡಾ.ಅಶ್ವಿನಿ ಕುಮಾರ್ ಉಪಸ್ಥಿತರಿದ್ದರು ಕೆಎಂಸಿಯ ಸಾವಿರಾರು ವಿದ್ಯಾರ್ಥಿ ಗಳು ಹಾಗೂ ಆಸಕ್ತರು ಕಲಾಕೃತಿಯನ್ನು ವೀಕ್ಷಿಸಿದರು.




Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News