×
Ad

ಬಸ್ರೂರಿನಲ್ಲಿ ಸಂವಿಧಾನ ಜಾಗೃತಿ ಜಾಥಾ

Update: 2024-02-08 22:20 IST

ಕುಂದಾಪುರ, ಫೆ.8: ಬಸ್ರೂರು ಗ್ರಾಮ ಪಂಚಾಯತ್‌ನಲ್ಲಿ ಸಂವಿಧಾನ ಜಾಗೃತಿ ಜಾಥಾ ಕಾರ್ಯಕ್ರಮದ ಅಂಗವಾಗಿ ಬಸ್ರೂರು ಬಸ್‌ನಿಲ್ದಾಣದಿಂದ ಗ್ರಾಮಪಂಚಾಯತ್‌ವರೆಗೆ ಜಾಥಾ ಕಾರ್ಯಕ್ರಮ ಇಂದು ನಡೆಯಿತು.

ಬಳಿಕ ಸಭಾ ಕಾರ್ಯಕ್ರಮವು ಬಸ್ರೂರು ಗ್ರಾಮ ಪಂಚಾಯತ್ ಸಭಾಭವನದಲ್ಲಿ ಗ್ರಾಮಪಂಚಾಯತ್ ಅಧ್ಯಕ್ಷರಾದ ಬೇಳೂರು ದಿನಕರ ಶೆಟ್ಟಿ ಇವರ ಅಧ್ಯಕ್ಷತೆಯಲ್ಲಿ ಜರುಗಿತು.

ಉಪಾಧ್ಯಕ್ಷರಾದ ಭಾಗೀರಥಿ, ಗ್ರಾಮ ಪಂಚಾಯತ್ ಸದಸ್ಯರು ಸಮಾಜ ಕಲ್ಯಾಣ ಇಲಾಖೆ ಅಧಿಕಾರಿ ರಾಘವೇಂದ್ರ ವರ್ಣೇಕರ್, ಮಾರ್ಗದರ್ಶಿ ಅಧಿಕಾರಿ ಡಾ. ಬಾಬಣ್ಣ ಪೂಜಾರಿ, ಸಂಪನ್ಮೂಲ ವ್ಯಕ್ತಿಯಾಗಿ ಶ್ರೀಕಾಂತ್ ಸಿದ್ದಾಪುರ, ಮುಖಂಡರಾದ ಗೋವಿಂದ ಮಾರ್ಗೋಳಿ, ಗೋಪಾಲ ಕಳಂಜಿ ಮಾಲಿಂಗ ಕೊಳ್ಕೆರೆ ಸಂಜೀವಿನಿ ಸಂಘ ಸದಸ್ಯರು ಆಶಾ ಕಾರ್ಯಕರ್ತೆಯರು ಅಂಗನವಾಡಿ ಕಾರ್ಯಕರ್ತೆಯರು ಆರೋಗ್ಯ ಇಲಾಖೆ ಸಿಬ್ಬಂದಿಗಳು ಭಾಗವಹಿಸಿದ್ದರು.

ಬಸ್ರೂರು ಗ್ರಾಮ ಪಂಚಾಯತಿ ವ್ಯಾಪ್ತಿಯ ಎಲ್ಲಾ ಶಾಲಾ ಮುಖ್ಯೋಪಾಧ್ಯಾಯರು ವಿವಿಧ ಇಲಾಖೆ ಅಧಿಕಾರಿಗಳು ಹಾಗೂ ಗ್ರಾಮಸ್ಥರು ಹಾಜರಿದ್ದರು. ಪಂಚಾಯತ್ ಅಭಿವೃದ್ಧಿ ಅಧಿಕಾರಿ ಚಂದ್ರ ಬಿಲ್ಲವ ಸ್ವಾಗತಿಸಿ ವಂದಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News