ಉಡುಪಿ ತಾಯಿ ಮತ್ತು ಮಕ್ಕಳ ಆಸ್ಪತ್ರೆಗೆ ಸಚಿವ ದಿನೇಶ್ ಗುಂಡೂರಾವ್ ಭೇಟಿ
Update: 2024-02-10 19:55 IST
ಉಡುಪಿ, ಫೆ.10: ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ ಇಂದು ಉಡುಪಿ ನಗರದಲ್ಲಿ ರುವ ಜಿಲ್ಲಾ ತಾಯಿ ಮತ್ತು ಮಕ್ಕಳ ಆಸ್ಪತ್ರೆಗೆ ಭೇಟಿ ನೀಡಿ, ಪರಿಶೀಲನೆ ನಡೆಸಿದರು.
ಆಸ್ಪತ್ರೆಯ ನಿರ್ವಹಣೆಗೆ ಹೆಚ್ಚುವರಿ ಅನುದಾನ ಬಿಡುಗಡೆ ಮಾಡಬೇಕು ಎಂದು ಶಾಸಕ ಯಶ್‌ಪಾಲ್ ಎ.ಸುವರ್ಣ ಸಚಿವರಿಗೆ ಮನವಿ ಮಾಡಿದರು. ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಡಾ.ಕೆ.ವಿದ್ಯಾ ಕುಮಾರಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳ ಆಯುಕತಿ ಡಿ ರಂದೀಪ, ಆರೋಗ್ಯ ಇಲಾಖೆಯ ನಿರ್ದೇಶಕಿ ಪುಷ್ಪಲತಾ ಬಿ.ಎಸ್., ಆರೋಗ್ಯ ಇಲಾಖೆಯ ಜಂಟಿ ನಿರ್ದೇಶಕಿ ಡಾ.ರಾಜೇಶ್ವರಿ, ಜಿಲ್ಲಾ ಸರ್ಜನ್ ಡಾ.ವೀಣಾ, ಜಿಲ್ಲಾ ಆರೋಗ್ಯ ಮತುತಿ ಕುಟುಂಬ ಕಲ್ಯಾಣ ಅಧಿಕಾರಿ ಡಾ.ಐ.ಪಿ.ಗಡಾದ್ ಉಪಸ್ಥಿತರಿದ್ದರು.