×
Ad

ಸಮಗ್ರ ಕೃಷಿ ಪದ್ದತಿ, ಹೈನುಗಾರಿಕೆಯಲ್ಲಿ ಉತ್ತಮ ಅವಕಾಶಗಳು: ಪ್ರಕಾಶ್ಚಂದ್ರ ಶೆಟ್ಟಿ

Update: 2024-02-11 19:02 IST

ಕುಂದಾಪುರ: ಸಮಗ್ರ ಕೃಷಿ ಪದ್ದತಿ, ಹೈನುಗಾರಿಕೆಯಲ್ಲಿ ಉತ್ಸಾಹ ಬೆಳೆಸಿಕೊಂಡರೆ ಉತ್ತಮ ಅವಕಾಶಗಳು ಲಭಿಸುತ್ತದೆ. ಮಹಿಳೆಯರು ಪುರುಷರಂತೆ ದುಡಿಮೆ ಮಾಡಿ ಕುಟುಂಬ ನಿರ್ವಹಣೆ ಮಾಡಲು ಹೈನುಗಾರಿಕೆ ಸಹಕಾರಿಯಾಗಿದೆ. ಎಂದು ದಕ್ಷಿಣ ಕನ್ನಡ ಜಿಲ್ಲಾ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟದ ನಿರ್ದೇಶಕ ಎಸ್.ಪ್ರಕಾಶ್ಚಂದ್ರ ಶೆಟ್ಟಿ ಹೇಳಿದ್ದಾರೆ.

ಕೋಟೇಶ್ವರ ವ್ಯವಸಾಯ ಸೇವಾ ಸಹಕಾರಿ ಸಂಘದ ವತಿಯಿಂದ ರವಿವಾರ ಕೋಟೇಶ್ವರದ ಕಮಲಮ್ಮ ಸರ್ವೋತ್ತಮ ಬುದ್ಯ ಕಲ್ಯಾಣಮಂಟಪದಲ್ಲಿ ಹಾಲು ಉತ್ಪಾದಕರ ಸಹಕಾರ ಸಂಘಗಳ ಸದಸ್ಯರಿಗಾಗಿ ಹಮ್ಮಿಕೊಂಡ ’ವೈಜ್ಞಾನಿಕ ಹೈನುಗಾರಿಕೆ ಅಭಿವೃದ್ಧಿ ಬಗ್ಗೆ ಮಾಹಿತಿ ಕಾರ್ಯಗಾರ’ ಉದ್ಘಾಟಿಸಿ ಅವರು ಮಾತನಾಡುತಿದ್ದರು.

ಗ್ರಾಮೀಣ ಭಾಗದ ಅಭಿವೃದ್ಧಿಯ ಜೊತೆಗೆ ಆರ್ಥಿಕತೆಗೆ ಕೊಡುಗೆ ನೀಡುವಲ್ಲಿ ಕೃಷಿ ಪತ್ತಿನ ಸಂಘಗಳು ಹಾಗೂ ಹಾಲು ಉತ್ಪಾದಕರ ಸಂಘಗಳು ಮುಂಚೂಣಿ ಯಲ್ಲಿದೆ. ರೈತರಿಗಾಗಿಯೇ ಆರಂಭಗೊಂಡ ಸಹಕಾರಿ ಪತ್ತಿನ ಸಂಘಗಳಿಂದ ರೈತರ ಅಭ್ಯುದಯವಾಗುತ್ತಿದೆ ಎಂದು ಅವರು ತಿಳಿಸಿದರು.

ಅಧ್ಯಕ್ಷತೆ ವಹಿಸಿದ್ದ ಕೋಟೇಶ್ವರ ವ್ಯವಸಾಯ ಸೇವಾ ಸಹಕಾರಿ ಸಂಘದ ಅಧ್ಯಕ್ಷ ಅಶೋಕ್ ಪೂಜಾರಿ ಬೀಜಾಡಿ ಮಾತ ನಾಡಿ, ಹೈನುಗಾರಿಕೆ ಅಂತಾ ರಾಷ್ಟ್ರೀಯ ಉದ್ಯಮವಾಗುವ ಮೂಲಕ ಹಲವರು ಉದ್ಯೋಗ ಕಂಡು ಕೊಂಡಿದ್ದು ಇದರಿಂದ ಮಹಿಳೆಯರು ಆರ್ಥಿಕವಾಗಿ ಸಬಲರಾಗಲು ಸಾಧ್ಯ. ಹೈನುಗಾರಿಕೆ ಉತ್ತಮ ಪ್ರೋತ್ಸಾಹ ಮತ್ತುಹಾಲಿಗೆ ಉತ್ತಮ ಬೆಲೆ ಸಿಕ್ಕಾಗ ಯುವಜನತೆ ಆಕರ್ಷಿತರಾಗುತ್ತಾರೆ. ಸರಕಾರ ಕೂಡ ಈ ನಿಟ್ಟಿನಲ್ಲಿ ಕ್ರಮ ವಹಿಸಬೇಕು ಎಂದರು.

ಕುಂದಾಪುರ ತಾಲೂಕು ಪಶು ವೈದ್ಯಾಧಿಕಾರಿ ಬಾಬಣ್ಣ ಪೂಜಾರಿ, ಕೆಎಂಎಫ್ ಒಕ್ಕೂಟದ ಪಶುವೈದ್ಯಾಧಿಕಾರಿ ಅನೀಲ್ ಕುಮಾರ್ ಶೆಟ್ಟಿ, ಕೈಲ್ಕೆರೆ ಹಾಲು ಉತ್ಪಾದಕರ ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸುಲೇಖಾ ಶೆಟ್ಟಿ ಮಾಹಿತಿ ಕಾರ್ಯಗಾರ ನಡೆಸಿಕೊಟ್ಟರು.

ಕೋಟೇಶ್ವರ ವ್ಯವಸಾಯ ಸೇವಾ ಸಹಕಾರಿ ಸಂಘದ ಉಪಾಧ್ಯಕ್ಷ ವಾದಿರಾಜ ಹೆಬ್ಬಾರ್, ನಿರ್ದೇಶಕರಾದ ಮೋಹನ ದಾಸ್ ಶೆಟ್ಟಿ, ಶರತ್ ಕುಮಾರ್ ಹೆಗ್ಡೆ, ನವೀನ್ ಕುಮಾರ್ ಹೆಗ್ಡೆ, ಚಂದ್ರಶೇಖರ ಶೆಟ್ಟಿ, ಭರತ್ ಕುಮಾರ್ ಶೆಟ್ಟಿ, ಸುರೇಶ್ ಕೆ.ವಿ., ನರಸಿಂಹ ಪೂಜಾರಿ, ಆಶಲತಾ, ಸುಧಾ, ಚಿಕ್ಕು, ಗೋಪಾಲ ಪೂಜಾರಿ, ಗೋಪಾಲ ಶೆಟ್ಟಿ ಉಪಸ್ಥಿತರಿದ್ದರು.

ಸಂಘದ ಮುಖ್ಯ ಕಾರ್ಯನಿರ್ವ ಹಣಾಧಿಕಾರಿ ಎಸ್.ವಿಶ್ವೇಶ್ವರ ಐತಾಳ್ ಸ್ವಾಗತಿಸಿದರು. ಶಾಖಾ ವ್ಯವಸ್ಥಾಪಕ ರಾಜ ಶೇಖರ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು. ಮಾಜಿ ಅಧ್ಯಕ್ಷ ಶರತ್ ಕುಮಾರ್ ಹೆಗ್ಡೆ ವಂದಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News