ದೀನದಯಾಳ್ ಉಪಾಧ್ಯಾಯರ ಪುಣ್ಯ ಸಂಸ್ಮರಣೆ- ಸಮರ್ಪಣಾ ದಿನಾಚರಣೆ
ಉಡುಪಿ: ಭಾರತೀಯ ಜನ ಸಂಘದ ಸಂಸ್ಥಾಪಕರಲ್ಲೊಬ್ಬರಾದ ಪಂಡಿತ್ ದೀನ ದಯಾಳ್ ಉಪಾಧ್ಯಾಯರವರ ದೂರ ದರ್ಶಿತ್ವದ ಚಿಂತನೆಗಳು, ತ್ಯಾಗ, ಬಲಿದಾನ, ಜೀವನಾದರ್ಶಗಳು ಪಕ್ಷದ ಕಾರ್ಯಕರ್ತರಿಗೆ ಸದಾ ಪ್ರೇರಣಾದಾಯಕ ಎಂದು ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಮಾಜಿ ಅಧ್ಯಕ್ಷ ಮಟ್ಟಾರ್ ರತ್ನಾಕರ ಹೆಗ್ಡೆ ಹೇಳಿದ್ದಾರೆ.
ಉಡುಪಿ ಜಿಲ್ಲಾ ಬಿಜೆಪಿ ವತಿಯಿಂದ ಬಿಜೆಪಿ ಜಿಲ್ಲಾ ಕಚೇರಿಯಲ್ಲಿ ರವಿವಾರ ನಡೆದ ಜನ ಸಂಘದ ಸಂಸ್ಥಾಪಕ ಪಂಡಿತ್ ದೀನದಯಾಳ್ ಉಪಾಧ್ಯಾಯರವರ ಪುಣ್ಯ ಸಂಸ್ಮರಣೆ ಹಾಗೂ ಸಮರ್ಪಣಾ ದಿನಾಚರಣೆ ಕಾರ್ಯಕ್ರಮವನ್ನು ಉದ್ದೇಶಿಸಿ ಅವರು ಮಾತನಾಡುತಿದ್ದರು.
ಅಧ್ಯಕ್ಷತೆಯನ್ನು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕಿಶೋರ್ ಕುಮಾರ್ ಕುಂದಾಪುರ ವಹಿಸಿದ್ದರು. ಬಿಜೆಪಿ ಮಂಗಳೂರು ಪ್ರಭಾರಿ ಕೆ.ಉದಯ ಕುಮಾರ್ ಶೆಟ್ಟಿ, ನಿಕಟಪೂರ್ವ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್, ಶಾಸಕರಾದ ಯಶ್ಪಾಲ್ ಎ.ಸುವರ್ಣ, ಸುರೇಶ್ ಶೆಟ್ಟಿ ಗುರ್ಮೆ, ಗುರುರಾಜ್ ಗಂಟಿಹೊಳೆ, ಮಾಜಿ ಶಾಸಕ ಲಾಲಾಜಿ ಆರ್.ಮೆಂಡನ್, ಮುಖಂಡರಾದ ನಯನಾ ಗಣೇಶ್, ಶಿಲ್ಪಾಜಿ.ಸುವರ್ಣ, ಉಮೇಶ್ ನಾಯ್ಕ್, ಕುತ್ಯಾರು ನವೀನ್ ಶೆಟ್ಟಿ, ರವಿ ಅಮೀನ್, ದಿನಕರ ಶೆಟ್ಟಿ ಹೆರ್ಗ, ಕೆ.ರಾಘವೇಂದ್ರ ಕಿಣಿ, ರೇಷ್ಮಾ ಉದಯ ಕುಮಾರ್ ಶೆಟ್ಟಿ ಮೊದಲಾದವರು ಉಪಸ್ಥಿತರಿದ್ದರು.