×
Ad

ಪೆರ್ಡೂರು ಗ್ರಾಪಂನಲ್ಲಿ ಸಂವಿಧಾನ ಜಾಗೃತಿ ಜಾಥ ಕಾರ್ಯಕ್ರಮ

Update: 2024-02-12 20:25 IST

ಉಡುಪಿ: ಜಿಲ್ಲಾಡಳಿತ ಜಿಲ್ಲಾ ಪಂಚಾಯತ್ ಮತ್ತು ಸಮಾಜ ಕಲ್ಯಾಣ ಇಲಾಖೆ ಉಡುಪಿ ಜಿಲ್ಲೆ ಇವರ ವತಿಯಿಂದ ಸಂವಿ ಧಾನ ದಿನಾಚರಣೆ ಪ್ರಯುಕ್ತ ಪೆರ್ಡೂರು ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ರವಿವಾರ ಸಂವಿಧಾನ ಜಾಗೃತಿ ಜಾಥ ಕಾರ್ಯಕ್ರಮ ನೆರವೇರಿತು.

ಸಂವಿಧಾನ ಜಾಗೃತಿ ಜಾಥ ಕಾರ್ಯಕ್ರಮದಲ್ಲಿ ಪೆರ್ಡೂರು ಪ್ರೌಢಶಾಲೆ ಯಿಂದ ಶಾಲಾ ವಿದ್ಯಾರ್ಥಿಗಳು ಬ್ಯಾಂಡ್‌ಸೆಟ್, ಬೈಕ್ ರ್ಯಾಲಿ ಮತ್ತು ಚಂಡೆವಾದನದೊಂದಿಗೆ ಆಗಮಿಸಿದ್ದು, ಗ್ರಾಮಪಂಚಾಯತ್ ಅಧ್ಯಕ್ಷೆ ಚೇತನಾ ಶೆಟ್ಟಿ ಹಾಗೂ ಸದ ಸ್ಯರು ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಪ್ರತಿಮೆಗೆ ಮಾಲಾರ್ಪಣೆ ಮಾಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

ನಿವೃತ್ತ ಪ್ರಾಂಶುಪಾಲ ಡಾ.ಗಣನಾಥ ಎಕ್ಕಾರು ಅವರು ಸಂವಿಧಾನದ ಮಹತ್ವದ ಕುರಿತು ಪ್ರಾಸ್ತಾವಿಕವಾಗಿ ಮಾತನಾಡಿ ದರು. ಸಮಾಜ ಕಲ್ಯಾಣ ಇಲಾಖೆ ಕಛೇರಿ ಅಧೀಕ್ಷಕಿ ಜಯಲಕ್ಷ್ಮೀ ದಿನ್ನಿ ಭಾರತ ಸಂವಿಧಾನದ ಪ್ರಸ್ತಾವನೆಯ ಪ್ರತಿಜ್ಞಾ ವಿಧಿ ಬೋಧಿಸಿದರು. ಶಾಲಾ ವಿದ್ಯಾರ್ಥಿಗಳಿಂದ ಅಂಬೇಡ್ಕರ್, ಗಾಂಧೀಜಿ, ಭಾರತಮಾತೆ ಮತ್ತು ಯಕ್ಷಗಾನ ಛಧ್ಮವೇಷ ಕಾರ್ಯಕ್ರಮಕ್ಕೆ ಮೆರಗು ನೀಡಿತು.

ಗ್ರಾಮ ಪಂಚಾಯತ್ ವ್ಯಾಪ್ತಿಯ ವಿವಿಧ ಶಾಲೆಗಳಲ್ಲಿ ಏರ್ಪಡಿಸಿದ ಸಂವಿಧಾನ ಕುರಿತಾದ ಭಾಷಣ, ಪ್ರಬಂಧ ಸ್ಪರ್ಧೆಯಲ್ಲಿ ವಿಜೇತರಾದವರಿಗೆ ಬಹುಮಾನ ವಿತರಿಸಲಾಯಿತು.

ಈ ಸಂದರ್ಭದಲ್ಲಿ ಉಪಾಧ್ಯಕ್ಷ ದೇವು ಪೂಜಾರಿ ಪಿಡಿಓ ಸುಮನಾ ಕೆ, ಜನಪ್ರತಿನಿಧಿಗಳು, ಅಧಿಕಾರಿ ವರ್ಗದವರು, ವಿವಿಧ ಸಂಘಟನೆಗಳ ಸದಸ್ಯರು, ಸಂಘ ಸಂಸ್ಥೆಗಳ ಪದಾಧಿಕಾರಿಗಳು, ಸದಸ್ಯರು, ಗ್ರಾಮಲೆಕ್ಕಿಗ ಗುರುಪ್ರಸಾದ್, ಸಂಘಟನಾ ಕಾರರು, ಅಂಗನವಾಡಿ ಕಾರ್ಯಕರ್ತೆಯರು, ಆಶಾ ಕಾರ್ಯಕರ್ತೆಯರು, ಗ್ರಾಪಂ ವ್ಯಾಪ್ತಿಯ ಶಾಲೆಗಳ ಮುಖ್ಯೋ ಪಾಧ್ಯಾಯರು, ಶಿಕ್ಷಕ ಹಾಗೂ ವಿದ್ಯಾರ್ಥಿಗಳು, ಸಂಜೀವಿನಿ ಸಂಘದ ಸದಸ್ಯರು, ಎಸ್.ಎಲ್.ಆರ್.ಎಮ್ ಸಂಘದ ಪದಾಧಿಕಾರಿಗಳು ಮತ್ತಿತರರು ಉಪಸ್ಥಿತರಿದ್ದರು. ಗ್ರಾಮ ಪಂಚಾಯತ್ ಪಿಡಿಓ ಸುಮನಾ ಕೆ. ಸ್ವಾಗತಿಸಿದರು.

ವಿವಿದೆಡೆಗಳಲ್ಲಿ ಸಂವಿಧಾನ ಜಾಗೃತಿ ಜಾಥ: ಜಿಲ್ಲಾಡಳಿತ, ಸಮಾಜ ಕಲ್ಯಾಣ ಇಲಾಖೆಗಳ ವತಿಯಿಂದ ನಡೆದಿರುವ ಸಂವಿಧಾನ ಜಾಗೃತಿ ಜಾಥ ಕಾರ್ಯಕ್ರಮ ಇತ್ತೀಚೆಗೆ ಜಿಲ್ಲೆಯ ವಿವಿದೆಡೆಗಳಲ್ಲಿ ನಡೆದವು.

ಬಾರಕೂರು ಗ್ರಾಪಂ ವ್ಯಾಪ್ತಿಯ ಮರಿನೊಲ್ ಪ್ರೌಢ ಶಾಲೆಯಲ್ಲಿ, ಆವರ್ಸೆ ಗ್ರಾಪಂ ವ್ಯಾಪ್ತಿಯ ಆವರ್ಸೆ ಸರಕಾರಿ ಪ್ರೌಢ ಶಾಲೆಯಲ್ಲಿ, ಬ್ರಹ್ಮಾವರ ತಾಲೂಕು ಯಡ್ತಾಡಿ ಗ್ರಾಪಂನ ರಂಗನಕೆರೆ ಕೊರಗ ಕಾಲೋನಿಯಲ್ಲಿ, ಯಡ್ತಾಡಿ ಗ್ರಾಪಂನ ಸಾಯಿಬ್ರಕಟ್ಟೆ ಸರ್ಕಲ್‌ನಲ್ಲಿ ನಡೆದವು.

ಎಲ್ಲಾ ಕಡೆಗಳಲ್ಲಿ ಡಾ.ಅಂಬೇಡ್ಕರ್ ಭಾವಚಿತ್ರಕ್ಕೆ ಮಾಲಾರ್ಪಣೆ, ಸಂವಿಧಾನ ಪೀಠಿಕೆಯ ಬೋಧನೆ, ಸಂವಿಧಾನದ ಕುರಿತು ತಜ್ಞರಿಂದ ಮಾಹಿತಿ, ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದವರಿಗೆ ಬಹುಮಾನ ವಿತರಣೆ ನಡೆದವು.




Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News