×
Ad

ಮಣಿಪಾಲ ಮ್ಯಾರಥಾನ್‌ನಲ್ಲಿ ಸಂವಿಧಾನ ಜಾಗೃತಿ ಸಿಗ್ನೇಚರ್ ಕ್ಯಾಂಪೇನ್

Update: 2024-02-12 20:26 IST

ಉಡುಪಿ: ಮಣಿಪಾಲದಲ್ಲಿ ಮಣಿಪಾಲದ ಮಾಹೆ ಸಂಸ್ಥೆಯು ಉಡುಪಿ ಜಿಲ್ಲಾ ಅಮಚೂರು ಅಥ್ಲೆಟಿಕ್ ಅಸೋಸಿಯೇಷನ್ ಸಹಯೋಗ ದೊಂದಿಗೆ ಆಯೋಜಿಸಿದ್ದ ಮಣಿಪಾಲ ಮ್ಯಾರಥಾನ್ ಕಾರ್ಯಕ್ರಮದಲ್ಲಿ ಜಿಲ್ಲಾಡಳಿತ ಹಾಗೂ ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಸಂವಿಧಾನ ಜಾಗೃತಿ ಜಾಥಾ ಪ್ರಯುಕ್ತ ಸಿಗ್ನೇಚರ್ ಕ್ಯಾಂಪೇನ್ ನಡೆಯಿತು.

ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ಡಾ.ಕೆ.ವಿದ್ಯಾಕುಮಾರಿ ಸಂವಿಧಾನ ಪೀಠಿಕೆ ಬೋಧಿಸಿದರು. ಈ ಸಂದರ್ಭದಲ್ಲಿ ಶಾಸಕ ಯಶ್‌ಪಾಲ್ ಎ. ಸುವರ್ಣ, ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕಿ ಅನಿತಾ ಮಡ್ಲೂರು, ಮಾಹೆಯ ವಿವಿಧ ಪದಾಧಿಕಾರಿಗಳು, ವಿದ್ಯಾರ್ಥಿಗಳು ಹಾಗೂ ಮತ್ತಿತರರು ಉಪಸ್ಥಿತರಿದ್ದರು.

ಸಾರ್ವಜನಿಕರಿಂದ ಸಂವಿಧಾನ ಜಾಗೃತಿ ಜಾಥಾ ಪ್ರಯುಕ್ತ ಸಿಗ್ನೇಚರ್ ಕ್ಯಾಂಪೇನ್ ಮಾಡಲಾಗಿದ್ದು, ಅಲ್ಲಿ ಅಳವಡಿ ಸಲಾಗಿದ್ದ ಸೆಲ್ಫಿ ಸ್ಟ್ಯಾಂಡ್ ಗಳಲ್ಲಿ ಸಾರ್ವಜನಿಕರು, ವಿದ್ಯಾರ್ಥಿಗಳು ಫೋಟೋಗಳನ್ನು ಕ್ಲಿಕ್ಕಿಸಿ ಸಂತಸ ವ್ಯಕ್ತ ಪಡಿಸಿದರು.



Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News