×
Ad

ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

Update: 2024-02-14 21:17 IST

ಉಡುಪಿ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ವತಿಯಿಂದ ಕೇಂದ್ರ ಸರಕಾರದ ಮಿಷನ್ ಶಕ್ತಿ ಯೋಜನೆಯಡಿ ಜಿಲ್ಲಾ ಮಹಿಳಾ ಸಬಲೀಕರಣ ಘಟಕಕ್ಕೆ ಗುತ್ತಿಗೆ ಆಧಾರದ ಮೇರೆಗೆ ವಿವಿಧ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ.

ಜಿಲ್ಲಾ ಮಿಷನ್ ಸಂಯೋಜಕರ ಹುದ್ದೆಗೆ ಜೀವ ವಿಜ್ಞಾನ, ಪೌಷ್ಠಿಕ, ವೈದ್ಯಕೀಯ ಆರೋಗ್ಯ ನಿರ್ವಹಣೆ, ಸಮಾಜ ವಿಜ್ಞಾನ, ಸಮಾಜ ಕಾರ್ಯ ಹಾಗೂ ಗ್ರಾಮೀಣ ನಿರ್ವಹಣೆಗಳಲ್ಲಿ ಪದವೀಧರರಾಗಿರಬೇಕು. ಆರ್ಥಿಕ ಸಾಕ್ಷರತೆ ತಜ್ಞರ ಮತ್ತು ಲೆಕ್ಕಿಗರ ಹುದ್ದೆಗಳಿಗೆ ಅರ್ಥಶಾಸ್ತ್ರ ಅಥವಾ ಬ್ಯಾಂಕಿಂಗ್ ವಿಷಯಗಳಲ್ಲಿ ಪದವೀಧರರಾಗಿರಬೇಕು. ಸರಕಾರಿ ಅಥವಾ ಸ್ವಯಂ ಸೇವಾ ಸಂಸ್ಥೆಗಳಲ್ಲಿ ಕನಿಷ್ಠ 3 ವರ್ಷದ ಅನುಭವ ಹೊಂದಿರಬೇಕು.

ಫೆಬ್ರವರಿ 23 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದ್ದು, ಹೆಚ್ಚಿನ ಮಾಹಿತಿಗಾಗಿ ದೂ.ಸಂ: 0820-2574978 ಅನ್ನು ಸಂಪರ್ಕಿಸಬಹುದ ಎಂದು ಇಲಾಖೆಯ ಪ್ರಕಟಣೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News