ಯುವಕ ನಾಪತ್ತೆ
Update: 2024-02-14 21:20 IST
ಉಡುಪಿ, ಫೆ.14: ಅಜ್ಜರಕಾಡು ಜಿಲ್ಲಾಸ್ಪತ್ರೆಯಲ್ಲಿ ಒಳರೋಗಿಯಾಗಿ ದಾಖಲಾಗಿದ್ದ ಶಿವಕುಮಾರ್ (35) ಎಂಬ ವ್ಯಕ್ತಿಯು 2023ರ ಡಿಸೆಂಬರ್ 11ರಂದು ಆಸ್ಪತ್ರೆಯಿಂದ ಹೊರಹೋದವರು ವಾಪಸ್ಸು ಬಾರದೇ ನಾಪತ್ತೆಯಾಗಿದ್ದಾರೆ.
168 ಸೆ.ಮೀ. ಎತ್ತರ, ಸಾಧಾರಣ ಮೈಕಟ್ಟು, ಗೋಧಿ ಮೈಬಣ್ಣ, ದುಂಡು ಮುಖ ಹೊಂದಿದ್ದು, ಕನ್ನಡ ಭಾಷೆ ಮಾತನಾಡು ತ್ತಾರೆ. ಇವರ ಬಗ್ಗೆ ಹೆಚ್ಚಿನ ಮಾಹಿತಿ ದೊರೆತಲ್ಲಿ ನಗರ ಪೊಲೀಸ್ ಠಾಣೆಯನ್ನು ಸಂಪರ್ಕಿಸಬಹುದು ಎಂದು ನಗರ ಠಾಣಾಧಿಕಾರಿಗಳ ಪ್ರಕಟಣೆ ತಿಳಿಸಿದೆ.