×
Ad

ಸಾಲಿಗ್ರಾಮ ಪ.ಪಂ: ಎರಡು ದಿನಗಳಿಗೊಮ್ಮೆ ನೀರು ಸರಬರಾಜು

Update: 2024-02-15 19:32 IST

ಉಡುಪಿ: ಸಾಲಿಗ್ರಾಮ ಪಟ್ಟಣ ಪಂಚಾಯತ್ ವಾಪ್ತಿಯಲ್ಲಿ ಅಂತರ್‌ಜಲ ಮಟ್ಟ ತೀವ್ರವಾಗಿ ಕಡಿಮೆಯಾಗಿರುವುದರಿಂದ ಕುಡಿ ಯುವ ನೀರಿನ ಸಮಸ್ಯೆ ಉದ್ಭವಿಸುವ ಸಾಧ್ಯತೆಗಳಿರುವ ಹಿನ್ನೆಲೆಯಲ್ಲಿ ಫೆ.15 ರಿಂದ ಪಟ್ಟಣ ಪಂಚಾಯತ್ ವ್ಯಾಪ್ತಿಯಲ್ಲಿ 2 ದಿನಗಳಿಗೊಮ್ಮೆ ನೀರು ಸರಬರಾಜು ಮಾಡಲು ಕ್ರಮ ಕೈಗೊಳ್ಳಲಾಗಿದೆ.

ಸಾರ್ವಜನಿಕರು ಹಾಗೂ ನಿವಾಸಿಗಳು ಮರ ಗಿಡಗಳಿಗೆ ನೀರನ್ನು ಬಿಡದೇ, ನೀರನ್ನು ಮಿತವಾಗಿ ಬಳಸುವ ಮೂಲಕ ಪಟ್ಟಣ ಪಂಚಾಯತ್‌ನೊಂದಿಗೆ ಸಹಕರಿಸುವಂತೆ ಸಾಲಿಗ್ರಾಮ ಪಟ್ಟಣ ಪಂಚಾಯತ್ ಮುಖ್ಯಾಧಿಕಾರಿಗಳು ಪ್ರಕಟನೆಯಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News