×
Ad

ಪಹಣಿಗಳಿಗೆ ಆಧಾರ್ ಸೀಡಿಂಗ್ ಕಡ್ಡಾಯ

Update: 2024-02-19 20:23 IST

ಉಡುಪಿ :ರೈತರಿಗೆ ನಿಗದಿತ ಸಮಯದಲ್ಲಿ ಸರಕಾರದ ಸೌಲಭ್ಯ ಗಳನ್ನು ಒದಗಿಸುವ ನಿಟ್ಟಿನಲ್ಲಿ ಆಧಾರ್ ಕಾಯ್ದೆಯ ಕಲಂ 4(4)(ಬಿ)(2)ರ ಅಡಿ ಪಹಣಿಗಳಿಗೆ ಆಧಾರ್ ಸೀಡಿಂಗ್ ಮಾಡಲು ಸರಕಾರದಿಂದ ಅನುಮತಿ ಯನ್ನು ನೀಡಲಾಗಿದ್ದು, ಜಿಲ್ಲೆಯ ರೈತರು ತಮ್ಮ ಜಮೀನಿನ ಪಹಣಿ ಹಾಗೂ ಆಧಾರ್ ದಾಖಲಾತಿಗಳೊಂದಿಗೆ ಸ್ವಯಂ ಪ್ರೇರಣೆಯಿಂದ ಇಲಾಖೆಯ ವೆಬ್‌ಸೈಟ್ - https://landrecords.karnataka.gov.in/service4-ನಲ್ಲಿ ಲಾಗಿನ್ ಮಾಡಿಕೊಂಡು ಆಧಾರ್‌ನೊಂದಿಗೆ ಲಿಂಕ್ ಮಾಡಿಸಲು ಅವಕಾಶ ವನ್ನು ಕಲ್ಪಿಸಲಾಗಿದೆ.

ಅಥವಾ ಪಹಣಿ ಹಾಗೂ ಆಧಾರ್ ದಾಖಲಾತಿಗಳೊಂದಿಗೆ ಸಂಬಂಧಪಟ್ಟ ಗ್ರಾಮ ಆಡಳಿತ ಅಧಿಕಾರಿಯವರನ್ನು ಸಂಪರ್ಕಿಸಿ ಆಧಾರ್ ಜೋಡಣೆ ಮಾಡಿಸಿಕೊಳ್ಳಬಹುದಾಗಿದೆ. ಜಿಲ್ಲೆಯ ರೈತರು ಹೆಚ್ಚಿನ ಸಂಖ್ಯೆಯಲ್ಲಿ ಇದರ ಸದುಪಯೋಗ ಪಡೆದುಕೊಳ್ಳುವಂತೆ ಜಿಲ್ಲಾಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News