×
Ad

ರಾಜ್ಯಮಟ್ಟದ ಉದ್ಯೋಗ ಮೇಳ : ನೋಂದಣಿಗೆ ಸೂಚನೆ

Update: 2024-02-19 20:24 IST

ಉಡುಪಿ: ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ, ಕರ್ನಾಟಕ ಕೌಶಲ್ಯಾಭಿವೃದ್ಧಿ ನಿಗಮ (ಕೆಎಸ್‌ಡಿಸಿ) ಬೆಂಗಳೂರು ಇವುಗಳ ವತಿಯಿಂದ ಉದ್ಯೋಗಾಕಾಂಕ್ಷಿಗಳಿಗೆ ಉದ್ಯೋಗಾವಕಾಶವನ್ನು ನೀಡುವ ಸಲುವಾಗಿ ಫೆಬ್ರವರಿ 26 ಮತ್ತು 27 ರಂದು ರಾಜ್ಯ ಮಟ್ಟದ ಯುವ ಸಮೃದ್ಧಿ ಸಮ್ಮೇಳನ, ಬೃಹತ್ ಉದ್ಯೋಗ ಮೇಳ-2024ವನ್ನು ಬೆಂಗಳೂರಿನ ಅರಮನೆ ಮೈದಾನದಲ್ಲಿ ಆಯೋಜಿಸಲಾಗಿದೆ.

ಎಲ್ಲಾ ರೀತಿಯ ವಿದ್ಯಾರ್ಹತೆಯುಳ್ಳ ಅರ್ಹ ಉದ್ಯೋಗಾಕಾಂಕ್ಷಿಗಳು -https://skillconnect.kaushalkar.com/- ಲಿಂಕ್‌ನಲ್ಲಿ ನೋಂದಣಿ ಮಾಡಿಕೊಳ್ಳುವ ಮೂಲಕ ಉದ್ಯೋಗ ಮೇಳದ ಸದುಪಯೋಗ ಪಡೆದುಕೊಳ್ಳುವಂತೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಮತ್ತು ಉಚಿತವಾಗಿ ನೋಂದಣಿ ಮಾಡಿಕೊಳ್ಳಲು ನಂ:201, ಬಿ ಬ್ಲಾಕ್, ಮೊದಲ ಮಹಡಿ, ರಜತಾದ್ರಿ, ಮಣಿಪಾಲದ ಜಿಲ್ಲಾ ಕೌಶಲ್ಯಾಭಿವೃದ್ದಿ ಅಧಿಕಾರಿಗಳ ಕಛೇರಿಯನ್ನು ಸಂಪರ್ಕಿಸಬಹುದು ಎಂದು ಜಿಲ್ಲಾ ಕೌಶಲ್ಯಾಭಿವೃದ್ಧಿ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News