×
Ad

ಉಡುಪಿ: ಭಯದ ವಾತಾವರಣ ಸೃಷ್ಟಿಸಿದ ಯುವಕ ಪೊಲೀಸರ ವಶಕ್ಕೆ

Update: 2024-02-20 19:00 IST

ಸುಶೀಲ್ 

ಉಡುಪಿ, ಫೆ.20: ನಗರದ ಕಾಡುಬೆಟ್ಟು ಪರಿಸರದಲ್ಲಿ ರಾತ್ರಿ ಹೊತ್ತಿನಲ್ಲಿ ದಾಂಧಲೆ ನಡೆಸಿ ಭಯದ ವಾತಾವರಣ ಸೃಷ್ಟಿಸುತ್ತಿದ್ದ ಯುವಕನನ್ನು ಪೊಲೀಸರು ವಶಕ್ಕೆ ಪಡೆದು ಆಸ್ಪತ್ರೆಗೆ ದಾಖಲಿಸಿದ್ದಾರೆ.

ಯುವಕನನ್ನು ಒಡಿಶಾ ಮೂಲದ ಸುಶೀಲ್ ಕೂಜೂರ್ (35) ಎಂದು ಗುರುತಿಸಲಾಗಿದೆ.

ಈತನನ್ನು ಸಮಾಜ ಸೇವಕ ನಿತ್ಯಾನಂದ ಒಳಕಾಡು ಹಾಗೂ ನಗರ ಪೊಲೀಸ್ ಠಾಣೆಯ ಹೆಡ್‌ಕಾನ್ಸ್ಟೇಬಲ್ ರಿಯಾಝ್ ಮತ್ತು 112 ಪೊಲೀಸ್ ತುರ್ತು ಸಾಹಯವಾಣಿಯ ಸಿಬ್ಬಂದಿ ವಶಕ್ಕೆ ಪಡೆದು ಅಜ್ಜರಕಾಡು ಜಿಲ್ಲಾಸ್ಪತ್ರೆಗೆ ದಾಖಲಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News