ಸಂವಿಧಾನ ಜಾಗೃತಿ ಜಾಥಾ ಪ್ರಯುಕ್ತ ಪಂಜಿನ ಮೆರವಣಿಗೆ
Update: 2024-02-20 21:07 IST
ಉಡುಪಿ: ಸಂವಿಧಾನ ಜಾಗೃತಿಯ ಅಂಗವಾಗಿ ಜನರಲ್ಲಿ ಜಾಗೃತಿ ಮೂಡಿಸುವ ಪಂಜಿನ ಮೆರವಣಿಗೆಗೆ ಜಿಲ್ಲಾಧಿಕಾರಿ ಡಾ.ಕೆ.ವಿದ್ಯಾಕುಮಾರಿ ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ಎಸ್‌ಪಿ ಡಾ.ಅರುಣ್ ಕೆ, ಜಿಲ್ಲಾ ಪಂಚಾಯತ್ ಕಾರ್ಯನಿರ್ವಹಣಾಧಿಕಾರಿ ಪ್ರತೀಕ್ ಬಾಯಲ್, ತರಬೇತಿ ನಿರತ ಐಪಿಎಸ್ ಅಧಿಕಾರಿ ಹರ್ಷಂಪ್ರಿಯವದ, ಸಮಾಜ ಕಲ್ಯಾಣ ಅಧಿಕಾರಿ ಅನಿತಾ ಮಡ್ಲೂರು ಮತ್ತಿತರರು ಉಪಸ್ಥಿತರಿದ್ದರು.
ಅಜ್ಜರಕಾಡಿನ ಹುತಾತ್ಮರ ಸ್ಮಾರಕದಿಂದ ಸರ್ವಿಸ್ ಬಸ್‌ನಿಲ್ದಾಣದವರೆಗೆ ಡೊಳ್ಳು ಕುಣಿತದೊಂದಿಗೆ ನಡೆದ ಪಂಜಿನ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳು ಸಂವಿಧಾನ ಕುರಿತ ಘೋಷವಾಕ್ಯಗಳನ್ನು ಕೂಗುತ್ತಾ ಸಾಗಿದರು.