ಉಡುಪಿ ನಗರದಲ್ಲಿ ಸಂವಿಧಾನ ಜಾಗೃತಿ ಜಾಥಾ
Update: 2024-02-20 21:11 IST
ಉಡುಪಿ: ಉಡುಪಿಯ ಬ್ರಹ್ಮಗಿರಿ ವೃತ್ತದಲ್ಲಿ ಸಂವಿಧಾನ ಜಾಗೃತಿ ಜಾಥಾದ ಸ್ಥಬ್ಧಚಿತ್ರಕ್ಕೆ ಇಂದು ಜಿಲ್ಲಾಧಿಕಾರಿ ಡಾ.ಕೆ. ವಿದ್ಯಾಕುಮಾರಿ ಸ್ವಾಗತಿಸಿ, ಮೆರವಣಿಗೆಗೆ ಚಾಲನೆ ನೀಡಿದರು.
ಸಂವಿಧಾನದ ಜಾಗೃತಿ ಜಾಥಾವು ಬ್ರಹ್ಮಗಿರಿ ವೃತ್ತದಿಂದ ಜಿಲ್ಲಾ ಕ್ರೀಡಾಂಗಣ ದವರೆಗೆ ಸಾಗಿದ್ದು, ಜಾಥಾದಲ್ಲಿ ಎಸ್‌ಪಿ ಡಾ.ಅರುಣ್ ಕೆ., ಪೌರಾಯುಕ್ತ ರಾಯಪ್ಪ, ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕಿ ಅನಿತಾ ಮಡ್ಲೂರು, ಜಿಲ್ಲಾ ಮಟ್ಟದ ಅಧಿಕಾರಿಗಳು, ಚಂಡೆ, ಯಕ್ಷಗಾನ ವೇಷಧಾರಿ ಗಳು, ಜನಪ್ರತಿನಿಧಿಗಳು, ನಗರಸಭೆಯ ಸಿಬ್ಬಂದಿಗಳು, ಸಮಾಜ ಕಲ್ಯಾಣ ಇಲಾಖೆ ಸಿಬ್ಬಂದಿಗಳು, ವಿವಿಧ ಇಲಾಖೆಯ ಅಧಿಕಾರಿಗಳು, ಪ್ರಾಂಶುಪಾಲ ರು, ವಿದ್ಯಾರ್ಥಿಗಳು, ಸಂಘ-ಸಂಸ್ಥೆಗಳ ಪದಾಧಿಕಾರಿಗಳು, ಸಾರ್ವಜನಿಕರು ಪಾಲ್ಗೊಂಡಿದ್ದು, ಸಂವಿಧಾನ ಜಾಗೃತಿ ಮೂಡಿಸುವ ಘೋಷಣೆಗಳನ್ನು ಕೂಗಿದರು.