×
Ad

ಯುವನಿಧಿ: ಪ್ರತಿ ತಿಂಗಳು ಸ್ವಯಂ ಘೋಷಣೆ ಕಡ್ಡಾಯ

Update: 2024-02-25 20:03 IST

ಉಡುಪಿ : ರಾಜ್ಯ ಸರಕಾರದ ಮಹತ್ವಾಕಾಂಕ್ಷಿ ಗ್ಯಾರಂಟಿ ಯೋಜನೆ ಗಳಲ್ಲಿ ಒಂದಾದ ಯುವನಿಧಿ ಯೋಜನೆಯಲ್ಲಿ ಪದವಿ, ಸ್ನಾತಕೋತ್ತರ ಪದವಿ ಮತ್ತು ಡಿಪ್ಲೊಮಾಗಳನ್ನು 2022-23ನೇ ಶೈಕ್ಷಣಿಕ ವರ್ಷದಲ್ಲಿ ವ್ಯಾಸಂಗ ಮಾಡಿ 2023ರಲ್ಲಿ ತೇರ್ಗಡೆ ಯಾದ ಅಭ್ಯರ್ಥಿಗಳು ಈಗಾಗಲೇ ಸೇವಾ ಸಿಂಧು ಪೋರ್ಟಲ್‌ನಲ್ಲಿ ನೋಂದಣಿಯಾಗಿದ್ದು, ಫಲಿತಾಂಶದ ನಂತರ ನಿರುದ್ಯೋಗಿಗಳಾಗಿ 180 ದಿನ ಪೂರೈಸಿದ ಅಭ್ಯರ್ಥಿಗಳಿಗೆ ಇದೇ ಜನವರಿ ತಿಂಗಳಲ್ಲಿ ನೇರ ನಗದು ಹಣ ವರ್ಗಾವಣೆ ಮಾಡಲಾಗಿದೆ.

ಅಭ್ಯರ್ಥಿಗಳು ಈ ಪ್ರಯೋಜನವನ್ನು ಪ್ರತಿ ತಿಂಗಳು ಪಡೆಯಬೇಕಿದ್ದರೆ, ಪ್ರತಿ ತಿಂಗಳಲ್ಲಿ ತಾನು ನಿರುದ್ಯೋಗಿಯೆಂದು, ವ್ಯಾಸಂಗ ಮುಂದುವರೆಸುತ್ತಿಲ್ಲವೆಂದು ಹಾಗೂ ಸ್ವಯಂ ಉದ್ಯೋಗಿಯಲ್ಲವೆಂದು ಸ್ವಯಂಘೋಷಣೆ ಯನ್ನು ಮಾಡಬೇಕಾಗಿದೆ.

ಪ್ರಸ್ತಕ ಫೆಬ್ರವರಿ ತಿಂಗಳಲ್ಲಿ ಫೆ.29ರವರೆಗೆ ಸೇವಾ ಸಿಂಧು ಪೋರ್ಟಲ್‌ನಲ್ಲಿ ಸ್ವಯಂ ಘೋಷಣೆ ಪ್ರಮಾಣ ಪತ್ರವನ್ನು ಸಲ್ಲಿ ಸಲು ಅವಕಾಶ ಕಲ್ಪಿಸಲಾಗಿದೆ. ಪ್ರಯೋಜನೆ ಪಡೆಯುತ್ತಿರುವ ಅರ್ಹ ಅಭ್ಯರ್ಥಿಗಳು ಪ್ರತಿ ತಿಂಗಳು ಸ್ವಯಂ ಘೋಷಣೆ ಮಾಡದಿದ್ದಲ್ಲಿ ಅಂತಹ ಅಭ್ಯರ್ಥಿಗಳಿಗೆ ನೇರ ನಗದು ವರ್ಗಾವಣೆ ಮಾಡಲಾಗುವುದಿಲ್ಲ ಎಂದು ತಿಳಿಯಪಡಿಸಲಾಗಿದೆ.

ಈಗಾಗಲೇ ನೋಂದಾಯಿಸಿಕೊಂಡ ಅಭ್ಯರ್ಥಿಗಳಿಗೆ ಜನವರಿ ತಿಂಗಳ ನೇರ ನಗದು ವರ್ಗಾವಣೆ ಮಾಡಲಾಗಿದ್ದು, ಮುಂದಿನ ತಿಂಗಳು ಪ್ರಯೋಜನ ಪಡೆದುಕೊಳ್ಳಲು ಸ್ವಯಂ ಘೋಷಣೆ ಮಾಡಬೇಕಾಗಿರುವ ಬಗ್ಗೆ ಎಸ್‌ಎಂಎಸ್ ಸಂದೇಶವನ್ನು ಎಲ್ಲಾ ಅರ್ಹ ಅಭ್ಯರ್ಥಿಗಳಿಗೆ ರವಾನಿಸಲಾಗಿದೆ. ಅಭ್ಯರ್ಥಿ ಗಳು ಕಡ್ಡಾಯವಾಗಿ ಆಧಾರ್ ಸೀಡಿಂಗ್ ಆಗಿರುವ ಬ್ಯಾಂಕ್ ಖಾತೆಯನ್ನು ಹೊಂದಿರಬೇಕು. ಅಭ್ಯರ್ಥಿಗಳು ಸ್ವಯಂ ಘೋಷಣೆ ಮಾಡಿಕೊಳ್ಳಲು -https://sevasindhugs.karnataka.gov.in- ವೆಬ್‌ಸೈಟ್‌ನ್ನು ನೋಡ ಬಹುದು.

ಹೆಚ್ಚಿನ ವಿವರಗಳಿಗೆ ದೂರವಾಣಿ ಸಂಖ್ಯೆ: 080-25189112ನ್ನು ಸಂಪರ್ಕಿಸುವಂತೆ ಕೈಗಾರಿಕಾ ತರಬೇತಿ ಹಾಗೂ ಉದ್ಯೋಗ ಇಲಾಖೆ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News