ಉಚಿತ ಪ್ರವೇಶ: ಅರ್ಜಿ ಆಹ್ವಾನ
Update: 2024-02-25 20:06 IST
ಉಡುಪಿ, ಫೆ.25: ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಕಾರ್ಕಳ ಮತ್ತು ಕಾಪುವಿನ ಅಲ್ಪ ಸಂಖ್ಯಾತರ ಮೌಲಾನ ಅಝಾದ್ ಆಂಗ್ಲ ಮಾಧ್ಯಮ ಮಾದರಿ ಶಾಲೆಯಲ್ಲಿ 6ರಿಂದ 9ನೇ ತರಗತಿಗೆ ಉಚಿತ ಪ್ರವೇಶ ಪಡೆಯಲು ಅಲ್ಪಸಂಖ್ಯಾತ ಜನಾಂಗದವರಾದ ಮುಸ್ಲಿಂ, ಕ್ರಿಶ್ಚಿಯನ್, ಜೈನ, ಬುದ್ಧರು, ಸಿಖ್ಖರು, ಪಾರ್ಸಿ ಹಾಗೂ ಇತರೆ ಜನಾಂಗದ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ದೂ. ಸಂ: 0820-2573596, ಕಾರ್ಕಳ ಮೌಲಾನಾ ಆಝಾದ್ ಮಾದರಿ ಶಾಲೆ ಮುಖ್ಯೋಪಾಧ್ಯಾಯರ ಮೊ.ನಂ 8762434245, 8123425690, ಉಡುಪಿ ತಾಲೂಕು ವಿಸ್ತರಣಾಧಿಕಾರಿ ದೂ.ಸಂ 8762388543 ಅಥವಾ ಕಾರ್ಕಳ ತಾಲೂಕು ಅಲ್ಪಸಂಖ್ಯಾತರ ಮಾಹಿತಿ ಕೇಂದ್ರದ ದೂ.ಸಂ: 08258-231101 ಅನ್ನು ಸಂಪರ್ಕಿಸಬಹುದು ಎಂದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಪ್ರಕಟಣೆ ತಿಳಿಸಿದೆ.