×
Ad

ಪ್ರತ್ಯೇಕ ಘಟನೆ: ಇಬ್ಬರು ನಾಪತ್ತೆ

Update: 2024-02-26 19:13 IST

ಉಡುಪಿ, ಫೆ.26: ಕಾಪು ನಿವಾಸಿ ರವಿ (51) ಎಂಬವರು ಎರಡು ತಿಂಗಳಿ ನಿಂದ ಬ್ರಹ್ಮಾವರ ತಾಲೂಕಿನ ವಾರಂಬಳ್ಳಿ ಗ್ರಾಮದ ಅಪ್ಪ-ಅಮ್ಮ ಅನಾಥಾಲಯದಲ್ಲಿ ವಾಸವಿದ್ದು, ಫೆ.22ರಂದು ಅಲ್ಲಿಂದ ಹೊರಹೋದವರು ವಾಪಸ್ಸು ಬಾರದೇ ನಾಪತ್ತೆಯಾಗಿದ್ದಾರೆ. 5 ಅಡಿ 7 ಇಂಚು ಎತ್ತರ, ಗೋಧಿ ಮೈಬಣ್ಣ. ಕೋಲು ಮುಖ, ಸಾಧಾರಣ ಮೈಕಟ್ಟು ಹೊಂದಿದ್ದು, ಕನ್ನಡ, ತುಳು ಭಾಷೆ ಮಾತನಾಡುತ್ತಾರೆ.

ಬ್ರಹ್ಮಾವರ: ಬ್ರಹ್ಮಾವರ ತಾಲೂಕು ಚೇರ್ಕಾಡಿ ಗ್ರಾಮದ ನಿವಾಸಿ ಹರೀಶ (39) ಎಂಬ ವ್ಯಕ್ತಿಯು ಜ.24ರಂದು ಮನೆಯಿಂದ ಹೊರಗೆ ಹೋದವರು ವಾಪಸು ಬಾರದೇ ನಾಪತ್ತೆಯಾಗಿದ್ದಾರೆ. ಇವರು 5 ಅಡಿ 9 ಇಂಚು ಎತ್ತರ, ಗೋಧಿ ಮೈಬಣ್ಣ, ದುಂಡು ಮುಖ, ದಪ್ಪ ಶರೀರ ಹೊಂದಿದ್ದು, ಕನ್ನಡ ಹಾಗೂ ಹಿಂದಿ ಭಾಷೆ ಮಾತನಾಡುತ್ತಾರೆ.

ಇವರಿಬ್ಬರ ಬಗ್ಗೆ ಹೆಚ್ಚಿನ ಮಾಹಿತಿ ದೊರೆತಲ್ಲಿ ಉಡುಪಿ ಪೊಲೀಸ್ ಕಂಟ್ರೋಲ್ ರೂಂ ದೂ.ಸಂ:0820-2526444, ಬ್ರಹ್ಮಾವರ ಪೊಲೀಸ್ ವೃತ್ತ ನಿರೀಕ್ಷಕರು ದೂ.ಸಂ:0820-2561966, ಬ್ರಹ್ಮಾವರ ಪೊಲೀಸ್ ಉಪ ನಿರೀಕ್ಷಕರು ದೂ.ಸಂ: 08250-2561044 ಅನ್ನು ಸಂಪರ್ಕಿಸಬಹುದು ಎಂದು ಬ್ರಹ್ಮಾವರ ಪೊಲೀಸ್ ಠಾಣಾಧಿಕಾರಿಗಳ ಪ್ರಕಟಣೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News