×
Ad

ʼಗೋ ಬ್ಯಾಕ್ ಶೋಭಾʼ ಅಭಿಯಾನ ಬಗ್ಗೆ ಶೋಭಾ ಕರಂದ್ಲಾಜೆಗೆ ತಿಳಿದಿರಲಿ: ರಮೇಶ್ ಕಾಂಚನ್

Update: 2024-02-26 19:21 IST

ಶೋಭಾ ಕರಂದ್ಲಾಜೆ

ಉಡುಪಿ: ಲೋಕಸಭಾ ಚುನಾವಣೆಯ ಬಳಿಕ ಕರ್ನಾಟಕ ರಾಜ್ಯದ ಕಾಂಗ್ರೆಸ್ ನೇತೃತ್ವದ ಸರಕಾರ ಪತನವಾಗಲಿದೆ ಎಂಬ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆಯವರ ಹೇಳಿಕೆ ಹತಾಶೆಯ ಪರಮವಾಧಿ ಎಂದು ಉಡುಪಿ ಬ್ಲಾಕ್ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ ರಮೇಶ್ ಕಾಂಚನ್ ಟೀಕಿಸಿದ್ದಾರೆ.

ಕರ್ನಾಟಕ ರಾಜ್ಯದ ಕಾಂಗ್ರೆಸ್ ಸರಕಾರ ನುಡಿದಂತೆ ಜನತೆಗೆ ಐದು ಗ್ಯಾರಂಟಿ ಯೋಜನೆಗಳನ್ನು ಜಾರಿಗೆಗೊಳಿಸಿ ಜನರ ಮನ್ನಣೆಗೆ ಪಾತ್ರವಾಗುತ್ತಿದ್ದು ಇದನ್ನು ಸಹಿಸಲು ಸಾಧ್ಯವಾಗದ ಸಚಿವೆ ಇಲ್ಲಸಲ್ಲದ ಹೇಳಿಕೆಗಳ ಮೂಲಕ ದಾರಿತಪ್ಪಿಸುವ ಕೆಲಸ ಮಾಡುತ್ತಿದ್ದಾರೆ. ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಕನಿಷ್ಠ 20 ಸ್ಥಾನಗಳನ್ನಾದರೂ ಗೆಲ್ಲಿಸುವುದರ ಮೂಲಕ ರಾಜ್ಯದ ಜನತೆ ಬಿಜೆಪಿಗೆ ಸೂಕ್ತ ಪಾಠ ಕಲಿಸಲಿದ್ದಾರೆ.

ಕಾಂಗ್ರೆಸ್ ಸರಕಾರ ಪತನದ ಚಿಂತೆ ಮಾಡುತ್ತಿರುವ ಸಂಸದೆ ಶೋಭಾ ಕರಂದ್ಲಾಜೆಯವರು ಮೊದಲು ತಮ್ಮ ಸ್ಥಾನವನ್ನು ಭದ್ರಪಡಿಸುವ ಪರಿಸ್ಥಿತಿ ಎದುರಾಗಿದೆ. ಈಗಾಗಲೇ ಗೋ ಬ್ಯಾಕ್ ಶೋಭಾ ಅಭಿಯಾನ ನಡೆಯುತ್ತಿದ್ದು ಅವರ ಪಕ್ಷದ ಕಾರ್ಯಕರ್ತರಿಂದ ಎನ್ನುವುದು ಅವರು ತಿಳಿದರಲಿ. ಜಿಲ್ಲೆಯ ಜ್ವಲಂತ ಸಮಸ್ಯೆಗಳಿಗೆ ಮುಕ್ತಿ ನೀಡಲು ವಿಫಲರಾಗಿರುವ ಶೋಭಾ ಕರಂದ್ಲಾಜೆ ಅವರ ವಿರುದ್ದ ಇಂತಹ ಅಭಿಯಾನ ನಡೆಯುತ್ತಿರುವುದು ಸರಿಯಾಗಿ ಇದೆ ಎಂದು ರಮೇಶ್ ಕಾಂಚನ್ ಹೇಳಿಕೆಯಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News