×
Ad

ಶ್ರೀಗಂಧ ಮತ್ತು ವನಕೃಷಿ ಬೆಳೆಗಾರರ ಸಂಘದ ಉಡುಪಿ ಜಿಲ್ಲಾ ಘಟಕ ಉದ್ಘಾಟನೆ

Update: 2024-02-27 19:01 IST

ಉಡುಪಿ, ಫೆ.27: ರೈತರೊಂದಿಗೆ ಅರಣ್ಯ ಮತ್ತು ತೋಟಗಾರಿಕಾ ಇಲಾಖೆ ನಿರಂತರ ಸಂವಹನವನ್ನು ಇಟ್ಟುಕೊಂಡು ರೈತ ಸ್ನೇಹಿಯಾಗಿ ಕಾರ್ಯ ನಿರ್ವಹಿಸುವ ಅಗತ್ಯವಿದೆ. ಆಗ ಜಿಲ್ಲೆಯಲ್ಲಿ ಪರಿಸರ ಅಭಿವೃದ್ದಿಗೆ ಪೂರಕ ವಾತಾವರಣ ಸೃಷ್ಟಿಯಾಗುತ್ತದೆೆ ಎಂದು ನಿವೃತ ಐಎಎಸ್ ಅಧಿಕಾರಿ ಹಾಗೂ ಅಖಿಲ ಕರ್ನಾಟಕ ಶ್ರೀಗಂಧ ಮತ್ತು ಕೃಷಿ ಬೆಳೆಗಾರರ ಸಂಘದ ರಾಜ್ಯ ಗೌರವಾಧ್ಯಕ್ಷ ಕೆ.ಅಮರನಾರಾಯಣ ಹೇಳಿದ್ದಾರೆ.

ಉಡುಪಿ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ರೈತರ ಸಭೆಯಲ್ಲಿ ಭಾಗವಹಿಸಿ ಅವರು ಮಾತನಾಡುತಿದ್ದರು.

ಅಧ್ಯಕ್ಷತೆಯನ್ನು ವಹಿಸಿದ್ದ ಜಿಲ್ಲಾಧಿಕಾರಿ ಡಾ.ವಿದ್ಯಾ ಕುಮಾರಿ ಮಾತನಾಡಿ, ಇಲಾಖೆ ಮತ್ತು ರೈತರ ನಡುವೆ ಸಂವಹನ ಅತಿ ಅಗತ್ಯ. ಅದನ್ನು ಮುಂದಿನ ದಿನಗಳಲ್ಲಿ ನಡೆಸಲಾಗುವುದು ಎಂದರು.

ಅಪರ ಜಿಲ್ಲಾಧಿಕಾರಿ ಮಮತಾದೇವಿ ಸ್ವಾಗತಿಸಿದರು. ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಕಛೇರಿ ಮುಂಬಾಗದಲ್ಲಿ ಶ್ರೀಗಂಧ ಮರವನ್ನು ನೆಡಲಾಯಿತು. ತದನಂತರ ಅಖಿಲ ಕರ್ನಾಟಕ ಶ್ರೀಗಂಧ ಮತ್ತು ವನಕೃಷಿ ಬೆಳೆಗಾರರ ಸಂಘದ ಜಿಲ್ಲಾ ಘಟಕವನ್ನು ರಚಿಸಲಾಯಿತು.

ಸಂಘದ ಅಧ್ಯಕ್ಷರಾಗಿ ಬಸ್ರೂರು ರಾಜೀವ್ ಶೆಟ್ಟಿ, ಉಪಾಧ್ಯಕ್ಷರಾಗಿ ಕೊಕ್ಕೆರ್ಣೆ ಬಾಲಕೃಷ್ಣ ಹೆಗ್ಡೆ ಮತ್ತು ನಿತ್ಯಾನಂದ ಶೆಟ್ಟಿ, ಗೌರವ ಕಾರ್ಯದರ್ಶಿಯಾಗಿ ಡಾ. ಗಣನಾಥ ಶೆಟ್ಟಿ ಎಕ್ಕಾರು, ಖಚಾಂಚಿಯಾಗಿ ರಾಘವೇಂದ್ರ ರಾವ್ ಉಪ್ಪೂರು ಹಾಗೂ 15 ಜನರ ಕಾರ್ಯಕಾರಿಣಿ ಸಮತಿಯನ್ನು ರಚಿಸಲಾಯಿತು. ಈ ಬಗ್ಗೆ ಆಸಕ್ತರು ದೂರವಾಣಿ ಸಂಖ್ಯೆ: 9844045105 ಮತ್ತು 9964583433ನ್ನು ಸಂಪರ್ಕಿಸಬಹುದಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News