ರಸ್ತೆ ಸಂಚಾರ ಸಮೀಕ್ಷೆ: ಸಾರ್ವಜನಿಕರ ಸಹಕಾರಕ್ಕೆ ಮನವಿ
Update: 2024-02-27 20:32 IST
ಫೈಲ್ ಫೋಟೊ
ಉಡುಪಿ, ಫೆ.27:ಪ್ರಸಕ್ತ ಸಾಲಿನಲ್ಲಿ ರಸ್ತೆ ಸಂಚಾರ ಸಮೀಕ್ಷೆಯು ಫೆಬ್ರವರಿ 29ರ ಬೆಳಗ್ಗೆ 6 ಗಂಟೆಯಿಂದ ಮಾರ್ಚ್ 2ರ ಬೆಳಗ್ಗೆ 6 ಗಂಟೆಯವರೆಗೆ ಉಡುಪಿ, ಕುಂದಾಪುರ ಹಾಗೂ ಕಾರ್ಕಳ ತಾಲೂಕುಗಳಲ್ಲಿನ ರಾಜ್ಯ ಹೆದ್ದಾರಿ ಮತ್ತು ಜಿಲ್ಲಾ ಮುಖ್ಯ ರಸ್ತೆಗಳ ಆಯ್ದ ಸ್ಥಳಗಳಲ್ಲಿ ನಡೆಯಲಿದೆ.
ಸಮೀಕ್ಷಾ ಕಾರ್ಯ ನಡೆಯುವ ಸ್ಥಳದಲ್ಲಿ ಸೂಚನಾ ಫಲಕಗಳನ್ನು ಅಳವಡಿಸಲಾಗಿದ್ದು, ಸಮೀಕ್ಷಾ ಕೇಂದ್ರಗಳಲ್ಲಿ ಒಂದು ನಿಮಿಷ ವಾಹನ ನಿಲ್ಲಿಸುವ ಮೂಲಕ ರಸ್ತೆ ಸಂಚಾರ ಸಮೀಕ್ಷೆಗೆ ವಾಹನ ಚಾಲಕರು ಹಾಗೂ ಸಾರ್ವನಿಕರು ಸಹಕರಿಸುವಂತೆ ಲೋಕೋಪಯೋಗಿ ಇಲಾಖೆಯ ಕಾರ್ಯನಿರ್ವಾಹಕ ಇಂಜಿನಿಯರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.